ಬೆಳಗಾವಿ.1 ಅಕ್ಟೋಬರ್ 2024 ರಂದು ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಬೆಳಗಾವಿ ವತಿಯಿಂದ ಆಯೋಜಿಸಲಾಗಿರುವ ಜಿಲ್ಲಾಮಟ್ಟದ ವಿಜ್ಞಾನ ನಾಟಕ ಸ್ಪರ್ಧೆಯನ್ನು ಬೆಳಗಾವಿ ತಾಲೂಕಿನ ಕಣಬರ್ಗಿಯ ಸರಕಾರಿ ಹಿರಿಯ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಏರ್ಪಡಿಸಲಾಗಿತ್ತು.
ಬೆಳಗಾವಿ ಜಿಲ್ಲೆಯ ಎಲ್ಲ ತಾಲೂಕಿನ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳು ಈ ನಾಟಕ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.
ಈ ನಾಟಕ ಸ್ಪರ್ಧೆಯಲ್ಲಿ ಬೈಲಹೊಂಗಲ ತಾಲೂಕಿನ ನಾಗನೂರು ಗ್ರಾಮದ ಶ್ರೀ ಶಿವಬಸವೇಶ್ವರ ಪ್ರೌಢಶಾಲೆ ನಾಗನೂರು ವಿದ್ಯಾರ್ಥಿಗಳು ಪ್ರಥಮ ಸ್ಥಾನವನ್ನು ಪಡೆದುಕೊಂಡು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಈ ವಿದ್ಯಾರ್ಥಿಗಳಿಗೆ ವಿಜ್ಞಾನ ಶಿಕ್ಷಕರಾದ ಶ್ರೀಮತಿ ನೇತ್ರ ವಿ ಅಂಗಡಿ ಅವರು ಮಾರ್ಗದರ್ಶನ ಮಾಡಿರುತ್ತಾರೆ.
ಈ ಮಕ್ಕಳ ಸಾಧನೆಗೆ ಮುಖ್ಯೋಪಾಧ್ಯಾಯ ಆರ್ ಆರ್ ಮಧಾಳೆ , ಎಲ್ಲಾ ಶಿಕ್ಷಕ ವರ್ಗ ಹಾಗೂ ಶಿಕ್ಷಣ ಸಂಸ್ಥೆಯ ಅಧ್ಯಕ್ಷರು ಉಪಾಧ್ಯಕ್ಷರು ಹಾಗೂ ಎಲ್ಲಾ ಸದಸ್ಯರು ಅಭಿನಂದನೆಗಳನ್ನು ಸಲ್ಲಿಸಿರುತ್ತಾರೆ. ಈ ಕಾರ್ಯಕ್ರಮಕ್ಕೆ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಪ್ರಾಚಾರ್ಯರು ಹಾಗೂ ಉಪನ್ಯಾಸಕರು ನೋಡಲ್ ಅಧಿಕಾರಿಗಳಾದ ಮಹಾಂತೇಶ್ ಹಾದಿಮನಿ ಅವರು ಉಪಸ್ಥಿತರಿದ್ದರು.