ಬೆಂಗಳೂರು, ಅಕ್ಟೋಬರ್ 08: ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂ ಬೆಳಗ್ಗೆ ರಾಜ್ಯದ ಹಲವು ಆರ್ಟಿಓ ಚೆಕ್ ಪೋಸ್ಟ್ಗಳ ಮೇಲೆ ದಾಳಿ ಮಾಡಿದ್ದಾರೆ. ಕೋಲಾರ, ಬೀದರ್, ವಿಜಯಪುರ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿನ ಆರ್ಟಿಓ ಚೆಕ್ ಪೋಸ್ಟ್ಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ, ಪರಿಶೀಲನೆ ನಡೆಸುತ್ತಿದ್ದಾರೆ.
ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ತಾಡಿಗೋಳ ಕ್ರಾಸ್ ಬಳಿ ಇರುವ ಆರ್ಟಿಓ ಚೆಕ್ ಪೋಸ್ಟ್ ಹಾಗೂ ಮುಳಬಾಗಿಲು ತಾಲೂಕು ನಂಗಲಿ ಆರ್ಟಿಓ ಚೆಕ್ ಪೋಸ್ಟ್ ಮೇಲೆ ಕೋಲಾರ ಲೋಕಾಯುಕ್ತ ಎಸ್ಪಿ ಧನಂಜಯ ನೇತೃತ್ವದ ತಂಡ ದಾಳಿ ಮಾಡಿದೆ.
ಆರ್ಟಿಓ ಚೆಕ್ ಪೋಸ್ಟ್ ಸಿಬ್ಬಂದಿ ವಿರುದ್ಧ ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಸೂಮೋಟೋ ಕೇಸ್ ದಾಖಲಿಸಿಕೊಂಡಿದ್ದಾರೆ. ದೂರು ಕೇಳಿಬಂದ ಆರ್ಟಿಓ ಚೆಕ್ಪೋಸ್ಟ್ಗಳ ಮೇಲೆ ಅಧಿಕಾರಿಗಳು ಇಂದು (ಅ.08) ಬೆಳ್ಳಂ ಬೆಳಗ್ಗೆ ದಾಳಿ ಮಾಡಿ, ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಎರಡೂ ಚೆಕ್ ಪೋಸ್ಟ್ಗಳಲ್ಲಿ ಸುಮಾರು 20 ಸಾವಿರಕ್ಕೂ ಅಧಿಕ ಹಣ ಪತ್ತೆಯಾಗಿದೆ. ಅಧಿಕಾರಿಗಳಿಂದ ಪರಿಶೀಲನೆ ಮುಂದುವರೆದಿದೆ.