ಅತ್ಯಾಚಾರ ಆರೋಪದಲ್ಲಿ ಶಾಸಕ ವಿನಯ್ ಕುಲಕರ್ಣಿ ವಿರುದ್ಧ ಎಫ್‌ಐಆರ್

Ravi Talawar
ಅತ್ಯಾಚಾರ ಆರೋಪದಲ್ಲಿ ಶಾಸಕ ವಿನಯ್ ಕುಲಕರ್ಣಿ ವಿರುದ್ಧ ಎಫ್‌ಐಆರ್
WhatsApp Group Join Now
Telegram Group Join Now

ಬೆಂಗಳೂರು: ತಮ್ಮ ಮೇಲೆ ಅತ್ಯಾಚಾರವೆಸಗಿ, ಕಿರುಕುಳ ನೀಡಿದ್ದಾರೆ ಎಂದು ಮಹಿಳೆಯೊಬ್ಬರು ನೀಡಿರುವ ದೂರಿನ ಅನ್ವಯ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ವಿರುದ್ಧ ಸಂಜಯ​ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ವಿನಯ್ ಕುಲಕರ್ಣಿ ಹಾಗೂ ಅವರ ಆಪ್ತ ಸಹಾಯಕ ಅರ್ಜುನ್ ವಿರುದ್ಧ ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್ ಮತ್ತು ಐಟಿ ಕಾಯ್ದೆಯಡಿ ಎಫ್‌ಐಆರ್ ದಾಖಲಾಗಿದೆ.

ಮಹಿಳೆಯ ದೂರಿನಲ್ಲಿ ಏನಿದೆ?: ”2022ರಲ್ಲಿ ನಾನು ಶಾಸಕ ಕುಲಕರ್ಣಿ ಭೇಟಿ ಮಾಡಿದ್ದು, ಆ ಬಳಿಕ ರೈತರೊಬ್ಬರಿಂದ ಅವರು ನನ್ನ ಫೋನ್ ನಂಬರ್ ಪಡೆದಿದ್ದರು. ನಂತರದಲ್ಲಿ ರಾತ್ರಿ ವೇಳೆಯೂ ನನಗೆ ಕರೆ ಮಾಡಲು ಪ್ರಾರಂಭಿಸಿದ್ದರು. ಆ ಬಳಿಕ, ಬೆತ್ತಲೆಯಾಗಿದ್ದಾಗ ವಿಡಿಯೋ ಕರೆ ಮಾಡುವಂತೆ, ಹೆಬ್ಬಾಳದಲ್ಲಿರುವ ತಮ್ಮ ಮನೆಗೆ ಬರುವಂತೆ ಒತ್ತಾಯಿಸಿದ್ದರು. ಇದಕ್ಕೆ ನಿರಾಕರಿಸಿದಾಗ, ಶಾಸಕರ ಮನೆಗೆ ಬರದಿದ್ದಲ್ಲಿ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ರೌಡಿಗಳು ಬೆದರಿಕೆ ಹಾಕಿದರು. ಏಪ್ರಿಲ್‌ನಲ್ಲಿ ಅವರು ನನ್ನನ್ನು ಬೆಳಗಾವಿಗೆ ಕರೆದಿದ್ದರು. ಅಲ್ಲಿ ತನ್ನ ಮೇಲೆ ಲೈಂಗಿಕ ಕಿರುಕುಳ ನೀಡಲು ಪ್ರಯತ್ನಿಸಿದ್ದಾರೆ” ಎಂದು ದೂರಿನಲ್ಲಿ ತಿಳಿಸಿದ್ದಾರೆ.

WhatsApp Group Join Now
Telegram Group Join Now
Share This Article