ಬೆಂಗಳೂರು: ರಾಜ್ಯದ 12 ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಕಡೆಗಳಲ್ಲಿ ಒಣಹವೆ ಮುಂದುವರೆಯಲಿದೆ ಎಂದಿರುವ ಹವಾಮಾನ ಇಲಾಖೆ, ಕೆಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.
ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ಚಾಮರಾಜನಗರ, ತುಮಕೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ ಹಾಗೂ ರಾಮನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮೈಸೂರು, ಮಂಡ್ಯ, ಹಾಸನ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ಯಾದಗಿರಿ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿಯಲ್ಲಿ ಸಾಧಾರಣ ಮಳೆಯಾಗಲಿದೆ. ಬಹುತೇಕ ಕಡೆ ಒಣಹವೆ ಇರಲಿದೆ.
ಕುಂದಾಪುರ, ಎಂಎಂ ಹಿಲ್ಸ್, ಧರ್ಮಸ್ಥಳ, ಬೆಳ್ತಂಗಡಿ, ಕೋಟ, ಸಿದ್ದಾಪುರ, ಉಡುಪಿ, ಮಂಕಿ, ಕಮ್ಮರಡಿ, ಗೋಕರ್ಣ, ಕಾರ್ಕಳ, ಕದ್ರಾ, ಗೇರುಸೊಪ್ಪ, ಆಗುಂಬೆ, ಚಾಮರಾಜನಗರ, ಕಾರವಾರ, ಕಳಸ, ಚಿಕ್ಕಮಗಳೂರು, ತ್ಯಾಗರ್ತಿ, ಕಡೂರು ಹಾಗೂ ಕೋಲಾರದಲ್ಲಿ ಮಳೆಯಾಗಿದೆ ಎಂದು ತಿಳಿಸಿದೆ.