ಎಲ್ಲಾ ಜಾತಿಗಳ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸ್ಥಿತಿಗತಿ ಅಧ್ಯಯನ ವರದಿ ಬಿಡುಗಡೆಗೆ ಒತ್ತಾಯ

Ravi Talawar
ಎಲ್ಲಾ ಜಾತಿಗಳ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸ್ಥಿತಿಗತಿ ಅಧ್ಯಯನ ವರದಿ ಬಿಡುಗಡೆಗೆ ಒತ್ತಾಯ
WhatsApp Group Join Now
Telegram Group Join Now

ರಾಜ್ಯದ ಎಲ್ಲಾ ಜಾತಿಗಳ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳನ್ನು ಅಧ್ಯಯನ ನಡೆಸಿ ತಯಾರಿಸಲಾಗಿರುವ ಸಮೀಕ್ಷಾವರದಿಯನ್ನು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಕೊಂಡು ಬಿಡುಗಡೆಗೊಳಿಸಬೇಕು ಎಂದು ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟ ಆಗ್ರಹಿಸಿದೆ.

ಸುಮಾರು ೧೫೯ ಕೋಟಿ ರೂ ಗಳನ್ನು ಖರ್ಚು ಮಾಡಿ ತಯಾರಿಸಿರುವ ಈ ವರದಿಯು ತಕ್ಷಣ ಫಲಪ್ರದ ಆಗಬೇಕು. ಈಗಾಗಲೇ ಅಹಿಂದ ವರ್ಗಗಳ ನಾಯಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ’ಇದು ಕೇವಲ ಹಿಂದುಳಿದ ವರ್ಗಗಳ ಜಾತಿ ಸಮೀಕ್ಷೆ ಅಲ್ಲ, ರಾಜ್ಯದ ಏಳು ಕೋಟಿ ಕನ್ನಡಿಗರ ಸಮೀಕ್ಷೆ .ಇಡೀ ದೇಶದಲ್ಲಿ ಇಂತಹ ಸಮೀಕ್ಷೆ ನಡೆಸಿದ ಪ್ರಥಮ ರಾಜ್ಯ ಕರ್ನಾಟಕ. ಅಕ್ಟೋಬರ್ ೧೮ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. ಈ ಮಾತಿಗೆ ಅವರು ಬದ್ಧರಾಗಿ ಜಾತಿವಾರು ಸ್ಥಿತಿಗತಿಗಳ ಅರಿಯುವ ಜಾತಿಗಣತಿ ಎಂದೇ ಕರೆಯಲಾಗುವ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷಾವರದಿಯನ್ನು ಸರ್ಕಾರ ಒಪ್ಪಿಕೊಂಡು ಬಿಡುಗಡೆ ಮಾಡಲು ಕ್ರಮ ಕೈಗೊಳ್ಳಬೇಕು.

ಕರ್ನಾಟಕ ೧೨ನೇ ಶತಮಾನದಲ್ಲೇ ಸಮಸಮಾಜವನ್ನು ಪ್ರತಿಪಾದಿಸಿದ ರಾಜ್ಯ. ಇಲ್ಲಿ ನಾಲ್ವಡಿ ಕೃ?ರಾಜ ಒಡೆಯರ್ ಕಾಲದಲ್ಲಿ ಮೈಸೂರು ಸಂಸ್ಥಾನದಲ್ಲಿ ಮೀಸಲಾತಿ ಜಾರಿ ಮಾಡಲಾಗಿತ್ತು. ದಿವಂಗತ ದೇವರಾಜ ಅರಸು ಅವರು ’ಹಾವನೂರು ಆಯೋಗ’ ರಚಿಸಿ ಹಿಂದುಳಿದ ವರ್ಗಗಳ ಅಧ್ಯಯನಕ್ಕೆ ಮುನ್ನುಡಿ ಬರೆದರು. ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯ್ಲಿ ಅವರು ಮೀಸಲಾತಿ ಮಿತಿಯನ್ನು ಶೇಕಡಾ ೭೩ಕ್ಕೆ ಏರಿಸುವ ಪ್ರಯತ್ನವಾಗಿತ್ತು. ಹೀಗೆ ಲಗಾಯತ್ತಿನಿಂದಲೂ ಸಾಮಾಜಿಕ ನ್ಯಾಯದ ಪರವಾಗಿರುವ ಕರ್ನಾಟಕ ಈಗ ಜಾತಿ ಜನಗಣತಿ ಅಥವಾ ರಾಜ್ಯದ ಎಲ್ಲಾ ಜಾತಿಗಳ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳನ್ನು ಅಧ್ಯಯನ ನಡೆಸಿ ಸಮೀಕ್ಷಾವರದಿಯನ್ನು ತಯಾರಿಸಿರುವುದು ಇಡೀ ದೇಶಕ್ಕೆ ಮಾದರಿಯಾಗಿದೆ.

ರಾಜ್ಯದ ಜನಸಂಖ್ಯೆಯ ಮುಕ್ಕಾಲು ಭಾಗಕ್ಕೂ ಜಾಸ್ತಿ ಇರುವ ಅಹಿಂದ ವರ್ಗಗಗಳಿಗೆ ಅವರ ಜನಸಂಖ್ಯೆಗೆ ಅನುಗುಣವಾಗಿ ರಾಜಕೀಯ ಪ್ರಾತಿನಿಧ್ಯ, ಉದ್ಯೋಗದ ಅವಕಾಶಗಳು ಮತ್ತು ವಿದ್ಯಾಭ್ಯಾಸದ ಅವಕಾಶಗಳು ಲಭಿಸಿಲ್ಲ. ಅಹಿಂದ ವರ್ಗಗಗಳಲ್ಲಿ ಅರಿವು ಮತ್ತು ಸಂಘಟನೆಯ ಕೊರತೆಯ ಕಾರಣಕ್ಕಾಗಿ ಅವಕಾಶಗಳು ಸಿಕ್ಕಿಲ್ಲ ಎನ್ನುವುದರ ಜೊತೆಗೆ ನಿರ್ಧಿ?ವಾಗಿ ಅವರ ಜನಸಂಖ್ಯಾ ಪರಿಸ್ಥಿತಿ ಗೊತ್ತಿಲ್ಲದಿರುವುದು ಪ್ರಮುಖ ಕಾರಣವಾಗಿದೆ. ಜಾತಿ ಜನಗಣತಿಯ ವರದಿ ಬಂದರೆ ಜಾತಿಗಳ ವಸ್ತುಸ್ಥಿತಿ ತಿಳಿಯಲಿದೆ. ಅದಕ್ಕೆ ಪೂರಕವಾಗಿ ಸರ್ಕಾರಗಳು ಕಾರ್ಯಕ್ರಮಗಳನ್ನು ರೂಪಿಸಬಹುದಾಗಿದೆ.
ಈಗ ರಾಜ್ಯದ ಸುಮಾರು ಆರೂವರೆ ಕೋಟಿ ಜನಸಂಖ್ಯೆಯ ಅಧ್ಯಯನವಾಗಿರುವುದರಿಂದ ಜಾತಿ ಜನಗಣತಿಯನ್ನು ಸರ್ಕಾರ ಒಪ್ಪಿಕೊಳ್ಳುವುದರಿಂದ ಎಲ್ಲಾ ಜಾತಿಗಳಿಗೂ ಒಂದಲ್ಲ ಒಂದು ರೀತಿಯಲ್ಲಿ ಅನುಕೂಲ ಆಗಲಿದೆ. ಹಾಗಾಗಿ ಎಲ್ಲಾ ಜಾತಿಗಳು ಕೂಡ ಜಾತಿ ಜನಗಣತಿ ವರದಿ ಬಿಡುಗಡೆಗೆ ಸರ್ಕಾರದ ಮೇಲೆ ಒತ್ತಡ ತರಬೇಕು.

ಮೀಸಲಾತಿ ಪರಿ?ರಣೆ, ಜಾತಿಗಳನ್ನು ಹೊಸ ವರ್ಗಕ್ಕೆ ಸೇರಿಸುವುದು ಅಥವಾ ಕೈಬಿಡುವುದು ಎಲ್ಲಕ್ಕೂ ಸುಪ್ರೀಂ ಕೋರ್ಟ್ ಯಾವುದಾದರೂ ಸಾಂವಿಧಾನಿಕ ಸ್ಥಾನಮಾನ ಇರುವ ಆಯೋಗದ ದತ್ತಾಂಶವನ್ನು ಕೇಳುತ್ತದೆ. ಇದು ಮಂಡಲ್ ವರದಿ ಅನು?ನವನ್ನು ಪ್ರಶ್ನಿಸಿದ್ದ ಅರ್ಜಿಯಿಂದ ಹಿಡಿದು ಹಲವಾರು ಪ್ರಕರಣಗಳಲ್ಲಿ ಕಂಡುಬಂದಿದೆ. ಆದುದರಿಂದ ಜಾತಿಗಳ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳನ್ನು ಅಧ್ಯಯನ ನಡೆಸಿ ತಯಾರಿಸಲಾಗಿರುವ ಸಮೀಕ್ಷಾವರದಿಯನ್ನು ರಾಜ್ಯ ಸರ್ಕಾರ ಒಪ್ಪಿಕೊಂಡು ಬಿಡುಗಡೆ ಮಾಡಬೇಕಾಗಿರುವುದು ಅತ್ಯಾವಶ್ಯಕವಾಗಿದೆ.

ಹಿರಿಯ ನ್ಯಾಯವಾದಿ ಎಚ್. ಕಾಂತರಾಜು ಅವರ ನೇತೃತ್ವದ ಆಯೋಗ ನಡೆಸಿದ ಸಮೀಕ್ಷೆಗೆ ಅಂಕಿ-ಅಂಶಗಳನ್ನೂ ಸಂಗ್ರಹಿಸಿದ ವಿಧಾನವನ್ನು ತಜ್ಞರ ಸಮಿತಿ ಮತ್ತು ಐಐಎಂ ಸಂಸ್ಥೆಗಳು ದೃಢೀಕರಿಸಿವೆ. ಅದರಿಂದಾಗಿ ಕೆಲವರು ಹೇಳುತ್ತಿರುವಂತೆ ಜಾತಿ ಜನಗಣತಿಯು ಅವೈಜ್ಞಾನಿಕವಾಗಿರಲು ಸಾಧ್ಯವಿಲ್ಲ. ಇದಕ್ಕೂ ಮೀರಿ ವರದಿ ಬಿಡುಗಡೆಯಾದ ನಂತರ ಯಾವುದಾದರೂ ಸಮುದಾಯಕ್ಕೆ ಆಕ್ಷೇಪಗಳಿದ್ದರೆ ಅದು ನ್ಯಾಯಾಲಯದ ಮೆಟ್ಟಿಲೇರಬಹುದು. ಇದನ್ನು ಬಿಟ್ಟು ವರದಿ ಹೊರಗೆ ಬರುವ ಮುನ್ನವೇ ಅಪಸ್ವರ ಎತ್ತುವುದು ಸರಿಯಲ್ಲ.

ಹಿಂದೆ ಮುಖ್ಯಮಂತ್ರಿಗಳಾಗಿದ್ದ ಹೆಚ್.ಡಿ. ಕುಮಾರಸ್ವಾಮಿ ಅವರಾಗಲಿ ಬಿ.ಎಸ್. ಯಡಿಯೂರಪ್ಪ ಅವರಾಗಲಿ ಯಾವ ಕಾರಣಕ್ಕೆ ಹಿಂದುಳಿದ ವರ್ಗಗಳ ಆಯೋಗದ ವರದಿಯನ್ನು ಒಪ್ಪಿರಲಿಲ್ಲವೊ ಗೊತ್ತಿಲ್ಲ. ಆದರೆ ಬಡವರು, ರೈತರು, ಮಹಿಳೆಯರು, ದಲಿತರು, ಅಲ್ಪಸಂಖ್ಯಾತರು ಮತ್ತು ಹಿಂದುಳಿದವರ್ಗದವರ ಬಗ್ಗೆ ಅಪಾರವಾದ ಕಾಳಜಿ ಇರುವ ಸದಾ ಸಾಮಾಜಿಕ ನ್ಯಾಯದ ಪರ ಇರುವ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿರುವುದರಿಂದ ಅವರು ರಾಜ್ಯದ ಏಳು ಕೋಟಿ ಜನರಿಗೂ ಅನುಕೂಲ ಆಗುವಂತಹ ಈ ಜಾತಿ ಜನಗಣತಿ ವರದಿಯನ್ನು ಒಪ್ಪಿ ಬಿಡುಗಡೆ ಮಾಡಬೇಕು.

ಇನ್ನೊಂದು ಮುಖ್ಯ ವಿ?ಯವೇನೆಂದರೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದರೂ ಅವರ ಸಚಿವ ಸಂಪುಟದಲ್ಲಿ ಪ್ರಭಾವಿ ಜಾತಿಗಳ ಕೆಲ ಸಚಿವರು ಇರಬಹುದು. ಅವರು ಜಾತಿ ಜನಗಣತಿ ವರದಿ ಬಿಡುಗಡೆಗೆ ಒಪ್ಪದಿರಬಹುದು. ಆದರೆ ಕಾಂಗ್ರೆಸ್ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ಜಾತಿ ಜನಗಣತಿ ನಡೆಸುವುದಾಗಿ ವಾಗ್ದಾನ ನೀಡಿತ್ತು ಎನ್ನುವುದನ್ನು ಮರೆಯಬಾರದು. ಕೊಟ್ಟ ಮಾತಿನಂತೆ ಈಗ ಜಾತಿ ಜನಗಣತಿ ವರದಿಯನ್ನು ಒಪ್ಪಿ ಬಿಡುಗಡೆ ಮಾಡಿ ’ನಾವು ನಡೆದಂತೆ ನಡೆಯುವವರು’ ಎನ್ನುವುದನ್ನು ಸಾಬೀತು ಮಾಡಬೇಕು.

ಅಕ್ಟೋಬರ್ ೧೮ ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಜಾತಿ ಜನಗಣತಿ ವರದಿಯನ್ನು ಮಂಡಿಸಿದಾಗ ಕೆಲವರು ಆಕ್ಷೇಪ ಎತ್ತಿ ಅದನ್ನು ಒಪ್ಪಬೇಕೋ-ಬೇಡವೋ ಎಂದು ನಿರ್ಧರಿಸುವ ಅಭಿಪ್ರಾಯ ಸಂಪುಟ ಸಭೆಯ ಅಧಿಕಾರ. ಆದರೆ ಸಂಪುಟ ಸಭೆಯಲ್ಲಿ ಮಂಡಿಸಬಾರದು ಎಂಬುದು ಗೂಂಡಾ ಪ್ರವೃತ್ತಿ. ಸರ್ವಾಧಿಕಾರಿ ಧೋರಣೆ. ಇದು ಪ್ರಜಾಪ್ರಭುತ್ವಕ್ಕೆ ಮಾರಕ. ಇಂತಹ ಜೊಳ್ಳು ಬೆದರಿಕೆಗೆ ತಲೆ ಕೆಡಿಸಿಕೊಳ್ಳದೆ ಮಾನ್ಯ ಸಿದ್ದರಾಮಯ್ಯ ನವರು ಯಾವುದೇ ಕಾರಣಕ್ಕೂ ಹಿಂದೆ ಸರಿಯಬಾರದು. ಇನ್ನ? ಕಾಲ ವಿಳಂಬವಾಗುವ ಆ ಮೂಲಕ ಎಂದೂ ಜಾತಿ ಜನಗಣತಿ ವರದಿಯನ್ನು ಒಪ್ಪದಂತೆ ಮಾಡುವ ಹುನ್ನಾರ ಕೆಲವರದು.

ರಾಜ್ಯ ಸರ್ಕಾರ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೇ ಅಕ್ಟೋಬರ್ ೧೮ ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಜಾತಿ ಜನಗಣತಿ ವರದಿಯನ್ನು ಒಪ್ಪಿ ಬಿಡುಗಡೆಗಾಗಿ ಒತ್ತಾಯಿಸಿ ದಿನಾಂಕ ೧೬ ಅಕ್ಟೋಬರ್ ೨೦೨೪ ರಂದು ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಹಕ್ಕೊತ್ತಾಯ ಸಮಾವೇಶ ಆಯೋಜಿಸುತ್ತೇವೆ.

ಈ ಸಮಾವೇಶದಲ್ಲಿ ನಾಡಿನ ಶೋಷಿತ ಸಮುದಾಯಗಳ ಜನತೆ,ಸಂಘ ಸಂಸ್ಥೆಗಳು, ಭಾಗವಹಿಸಲು ಕೋರುತ್ತೇವೆ ಎಂದು ಒಕ್ಕೂಟ ಹೇಳಿಕೊಂಡಿದೆ.

WhatsApp Group Join Now
Telegram Group Join Now
Share This Article