ಮೈಸೂರು ದಸರಾ 2024: ಇಂದು ವಿಶ್ವವಿಖ್ಯಾತ ಜಂಬೂಸವಾರಿ, ಸಿಎಂ ಸಿದ್ದರಾಮಯ್ಯ ಚಾಲನೆ

Ravi Talawar
ಮೈಸೂರು ದಸರಾ 2024: ಇಂದು ವಿಶ್ವವಿಖ್ಯಾತ ಜಂಬೂಸವಾರಿ, ಸಿಎಂ ಸಿದ್ದರಾಮಯ್ಯ ಚಾಲನೆ
WhatsApp Group Join Now
Telegram Group Join Now

ಮೈಸೂರು, ಅಕ್ಟೋಬರ್​ 12: ಇಂದು (ಅ.12) ವಿಜಯದಶಮಿ (ದಸರಾ) (Dasara) ನಿಮಿತ್ತ ಅರಮನೆ ನಗರಿ ಮೈಸೂರಿನಲ್ಲಿ ಜಂಬೂಸವಾರಿ ನಡೆಯಲಿದೆ. 750 ಕೆಜಿ ತೂಕದ ಅಂಬಾರಿ ಒಳಗೆ ಪ್ರತಿಷ್ಠಾಪಿಸಲಾಗಿರುವ ತಾಯಿ ಚಾಮುಂಡೇಶ್ವರಿ ದೇವಿಯನ್ನು ಹೊತ್ತು ಅಭಿಮನ್ಯು (Abhimanyu) ಆನೆ ರಾಜ ಗಾಂಭಿರ್ಯದಿಂದ ರಾಜಬೀದಿಗಳಲ್ಲಿ ಸಾಗುತ್ತಾನೆ (Jambu Savari).

ಬೆಳಗ್ಗೆ 8ಕ್ಕೆ ಚಾಮುಂಡಿ ಬೆಟ್ಟದಿಂದ ಉತ್ಸವ ಮೂರ್ತಿ ಮೆರವಣಿಗೆ ಮೂಲಕ ಅರಮನೆಗೆ ಆಗಮಿಸುತ್ತದೆ. ನಂತರ 10.15ಕ್ಕೆ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಉತ್ತರ ಪೂಜೆ ಮಾಡಲಿದ್ದಾರೆ. ಈ ವೇಳೆ ಅರಮನೆಗೆ ಪಟ್ಟದ ಆನೆ, ಪಟ್ಟದ ಹಸು, ಪಟ್ಟದ ಕುದುರೆ ಸವಾರಿ ತೊಟ್ಟಿಗೆ ಆಗಮಿಸಲಿವೆ. ಬಳಿಕ ಅರಮನೆಯ ಕರಿಕಲ್ಲು ತೊಟ್ಟಿಯಲ್ಲಿ 10.45ರಿಂದ ಬೆಳಗ್ಗೆ 11ರೊಳಗೆ ಜಟ್ಟಿ ಕಾಳಗ ನಡೆಯುತ್ತದೆ.

ನಂತರ 11.20 ರಿಂದ 11.45ರವರೆಗೆ ಅರಮನೆ ಅಂಗಳದ ಭುವನೇಶ್ವರಿ ದೇಗುಲಕ್ಕೆ ವಿಜಯಯಾತ್ರೆ ಸಾಗುತ್ತದೆ. ಇಲ್ಲಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಬನ್ನಿಪೂಜೆ ನೆರವೇರಿಸುತ್ತಾರೆ. ನಂತರ ಅರಮನೆಗೆ ಆಗಮಿಸಿ ಕಂಕಣ ವಿಸರ್ಜನೆ ಮಾಡುತ್ತಾರೆ.

WhatsApp Group Join Now
Telegram Group Join Now
Share This Article