ಮೈಸೂರು-ದರ್ಬಾಂಗ ಎಕ್ಸ್​ಪ್ರೆಸ್ ರೈಲು ಅಪಘಾತ: ಸಿಲುಕಿರುವ ಪ್ರಯಾಣಿಕರಿಗೆ ವಿಶೇಷ ರೈಲು ಸೇವೆ

Ravi Talawar
ಮೈಸೂರು-ದರ್ಬಾಂಗ ಎಕ್ಸ್​ಪ್ರೆಸ್ ರೈಲು ಅಪಘಾತ:  ಸಿಲುಕಿರುವ ಪ್ರಯಾಣಿಕರಿಗೆ ವಿಶೇಷ ರೈಲು ಸೇವೆ
WhatsApp Group Join Now
Telegram Group Join Now

ಚೆನ್ನೈ: ಮೈಸೂರು-ದರ್ಭಂಗಾ ಬಾಗಮತಿ ಎಕ್ಸ್‌ಪ್ರೆಸ್ ಮತ್ತು ಸರಕು ಸಾಗಣೆ ರೈಲು ಮಧ್ಯೆ ಚೆನ್ನೈಗೆ ಸಮೀಪವಿರುವ ಕವರೈಪೆಟ್ಟೈ ಬಳಿ ನಿನ್ನೆ ಶುಕ್ರವಾರ ರಾತ್ರಿ ಸಂಭವಿಸಿದ ರೈಲು ಅಪಘಾತದಲ್ಲಿ ಏಳು ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ದಕ್ಷಿಣ ರೈಲ್ವೆ ತಿಳಿಸಿದೆ.

ಹಳಿತಪ್ಪಿದ ಬಾಗ್ಮತಿ ಎಕ್ಸ್‌ಪ್ರೆಸ್‌ನ 13 ಬೋಗಿಗಳಲ್ಲಿ ಸಿಲುಕಿದ್ದ ಎಲ್ಲ ಪ್ರಯಾಣಿಕರನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗಾಯಾಳುಗಳ ಪೈಕಿ ಗಂಭೀರ ಗಾಯಗೊಂಡ ಮೂವರು ಪ್ರಯಾಣಿಕರನ್ನು ಸ್ಟಾನ್ಲಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಸಣ್ಣಪುಟ್ಟ ಗಾಯಗಳಾಗಿರುವ ನಾಲ್ವರು ಪೊನ್ನೇರಿಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರೈಲ್ವೆಯ ಅಧಿಕೃತ ಹೇಳಿಕೆಯ ಪ್ರಕಾರ ಎಲ್ಲಾ ಏಳು ಮಂದಿ ಪರಿಹಾರಗಳಡಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬಾಗಮತಿ ಎಕ್ಸ್‌ಪ್ರೆಸ್‌ನಲ್ಲಿ ಸಿಲುಕಿದ್ದ ಪ್ರಯಾಣಿಕರನ್ನು ಬಸ್‌ಗಳ ಮೂಲಕ ಪೊನ್ನೇರಿಗೆ ಮತ್ತು ನಂತರ ಚೆನ್ನೈ ಸೆಂಟ್ರಲ್‌ಗೆ ಎರಡು ವಿಶೇಷ ಉಪನಗರ ರೈಲುಗಳ ಮೂಲಕ ಮುಂಜಾನೆ ಸಾಗಿಸಲಾಯಿತು.

ಚೆನ್ನೈ ಸೆಂಟ್ರಲ್ ತಲುಪಿದ ನಂತರ, ರೈಲ್ವೇ ವೈದ್ಯರು ವೈದ್ಯಕೀಯ ತಪಾಸಣೆ ನಡೆಸಿದರು. ಪ್ರಯಾಣಿಕರಿಗೆ ಆಹಾರ ಮತ್ತು ನೀರನ್ನು ಒದಗಿಸಲಾಯಿತು, ಮೊದಲು ಅರಕ್ಕೋಣಂ, ರೇಣಿಗುಂಟಾ ಮತ್ತು ಗುಡೂರ್ ಮೂಲಕ ದರ್ಭಾಂಗಕ್ಕೆ ಹೋಗುವ ವಿಶೇಷ ರೈಲಿನಲ್ಲಿ ಪ್ರಯಾಣಿಸಲಾಯಿತು.ಈ ರೈಲು ಬೆಳಿಗ್ಗೆ 4:45 ಕ್ಕೆ ಚೆನ್ನೈ ಸೆಂಟ್ರಲ್‌ನಿಂದ ಹೊರಟಿದೆ.

WhatsApp Group Join Now
Telegram Group Join Now
Share This Article