ತೆರಿಗೆ ಹಂಚಿಕೆಯಲ್ಲಿ ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ತಾರತಮ್ಯ: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್

Ravi Talawar
ತೆರಿಗೆ ಹಂಚಿಕೆಯಲ್ಲಿ ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ತಾರತಮ್ಯ: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್
WhatsApp Group Join Now
Telegram Group Join Now

ಬೆಂಗಳೂರು: ತೆರಿಗೆ ಹಂಚಿಕೆಯಲ್ಲಿ ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ತಾರತಮ್ಯವಾಗಿದೆ. ತೆರಿಗೆ ತಾರತಮ್ಯ ಖಂಡಿಸಿ “ನಮ್ಮ ತೆರಿಗೆ ನಮ್ಮ ಹಕ್ಕು” ಎಂದು ಪ್ರತಿಭಟನೆ ಮಾಡುತ್ತೇವೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಅತಿಹೆಚ್ಚು ತೆರಿಗೆ ಪಾವತಿಸುವ ನಮ್ಮ ರಾಜ್ಯಕ್ಕೆ ತಾರತಮ್ಯವಾಗುತ್ತಿದೆ. ನಮ್ಮ ತೆರಿಗೆ ಹಣ ಉತ್ತರ ಪ್ರದೇಶ, ದೆಹಲಿ, ಬಿಹಾರಕ್ಕೆ ಕೊಡುತ್ತಿದ್ದಾರೆ. ಆಂಧ್ರಕ್ಕಿಂತ‌ಲೂ ಕಡಿಮೆ ಹಣ ನಮಗೆ ನೀಡಿದ್ದಾರೆ. ಅವರಿಗಿಂತ ನಾವು ಕೀಳಾ ಹಾಗಾದರೆ ಎಂದು ಕೇಳಿದರು.

WhatsApp Group Join Now
Telegram Group Join Now
Share This Article