ಒಟ್ಟಾವ, ಕೆನಡಾ: ಉಗ್ರ ನಿಜ್ಜರ್ ಹತ್ಯೆ ವಿಚಾರದಲ್ಲಿ ಕೆನಡಾ ಮತ್ತು ಭಾರತದ ರಾಜತಾಂತ್ರಿಕ ಸಂಬಂಧಗಳು ಮುರಿದುಬಿದ್ದಿವೆ. ಇದರ ಬೆನ್ನಲ್ಲೇ, ಕೆನಡಾ ಭಾರತದ ಮೇಲೆ ಮತ್ತೊಂದು ಗುರುತರ ಆರೋಪ ಮಾಡಿದೆ. ‘ಖಲಿಸ್ತಾನಿಗಳ ವಿರುದ್ಧ ಬಿಷ್ಣೋಯ್ ಲಾರೆನ್ಸ್ ಗ್ಯಾಂಗ್ ಅನ್ನು ಭಾರತ ಸರ್ಕಾರ ಬಳಸಿಕೊಳ್ಳುತ್ತಿದೆ’ ಎಂದು ಆರೋಪಿಸಿದೆ.
ಕೆನಡಾದ ರಾಷ್ಟ್ರೀಯ ಭದ್ರತೆಯ ಸಹಾಯಕ ಕಮಿಷನರ್ ಬ್ರಿಗಿಟ್ಟೆ ಗೌವಿನ್ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಭಾರತದ ಏಜೆಂಟರು ಖಲಿಸ್ತಾನಿ ಪರ ವ್ಯಕ್ತಿಗಳನ್ನು ಗುರಿಯಾಗಿಸಲು ಬಿಷ್ಣೋಯ್ ಲಾರೆನ್ಸ್ ಗ್ಯಾಂಗ್ ಅನ್ನು ಬಳಸುತ್ತಿದ್ದಾರೆ. ಅವರ ಮೂಲಕ ನಿಜ್ಜರ್ ಹತ್ಯೆ ಮಾಡಿಸಲಾಗಿದೆ ಎಂದು ದೂರಿದ್ದಾರೆ.
ದಕ್ಷಿಣ ಏಷ್ಯಾದ ಜನರನ್ನು, ಅದರಲ್ಲೂ ವಿಶೇಷವಾಗಿ ಖಲಿಸ್ತಾನಿ ಹೋರಾಟಗಾರರನ್ನು ಟಾರ್ಗೆಟ್ ಮಾಡಲಾಗಿದೆ. ತನಿಖೆ ಮತ್ತು ಗೌಪ್ಯತೆ ಕಾಪಾಡುವ ನಿಟ್ಟಿನಲ್ಲಿ ಹೆಚ್ಚಿನ ಮಾಹಿತಿಯನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ. ಬಿಷ್ಣೋಯ್ ಗ್ಯಾಂಗ್ನ ಸಂಘಟಿತ ಅಪರಾಧದ ಬಗ್ಗೆ ಮಾಹಿತಿ ಕಲೆಹಾಕಲಾಗುತ್ತಿದೆ ಎಂದರು.