ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಸ್ಥಾನಕ್ಕೆ ಕೆ ಮರಿಗೌಡ ರಾಜೀನಾಮೆ

Ravi Talawar
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಸ್ಥಾನಕ್ಕೆ ಕೆ ಮರಿಗೌಡ ರಾಜೀನಾಮೆ
WhatsApp Group Join Now
Telegram Group Join Now

ಮೈಸೂರು: ಕರ್ನಾಟಕ ಸಿಎಂ ಸಿದ್ದರಾಮಯ್ಯ ಅವರನ್ನು ಇನ್ನಿಲ್ಲದಂತೆ ಕಾಡುತ್ತಿರುವ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಹಗರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ತಲೆದಂಡವಾಗಿದ್ದು, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಸ್ಥಾನಕ್ಕೆ ಕೆ ಮರಿಗೌಡ ರಾಜೀನಾಮೆ ನೀಡಿದ್ದಾರೆ.

ಸಿಎಂ ಸೂಚನೆ ಹಿನ್ನೆಲೆ ವಿಕಾಸಸೌಧದಲ್ಲಿ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ದೀಪಾ ಚೋಳನ್​ಗೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನಕ್ಕೆ ಕೆ.ಮರಿಗೌಡ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.

ಇನ್ನು ರಾಜೀನಾಮೆ ವಿಚಾರವಾಗಿ ಇಂದು ಕಾವೇರಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯರನ್ನು ಮುಡಾ ಅಧ್ಯಕ್ಷ ಕೆ.ಮರಿಗೌಡ‌ ಭೇಟಿ ಮಾಡಿದ್ದರು. ಆ ಮೂಲಕ ಮುಡಾ ಅಧ್ಯಕ್ಷ ಸ್ಥಾನಕ್ಕೆ ಮರಿಗೌಡ ರಾಜೀನಾಮೆ ಕೋಡುವುದು ಖಚಿತ ಎನ್ನಲಾಗಿತ್ತು. ಕೆಲ ಕಾಲ ಸಿದ್ದರಾಮಯ್ಯ ಜೊತೆ ಮಾತನಾಡಿರುವ ಮರಿಗೌಡ, ಸಿಎಂ ಸೂಚಿನೆ ಮೇರೆಗೆ ರಾಜೀನಾಮೆ ನೀಡಿದ್ದು, ಇಂದು ಅಧಿಕಾರಿಗಳಿಗೆ ರಾಜೀನಾಮೆ ಪತ್ರ ನೀಡಿದ್ದಾರೆ ಎನ್ನಲಾಗಿದೆ.

ಅಂತೆಯೇ ಮುಡಾ ಪ್ರಕರಣದಿಂದ ಸರ್ಕಾರ ತೀವ್ರ ಮುಜುಗರಕ್ಕೆ ಸಿಲುಕಿದೆ. ಪ್ರಕರಣದ ತನಿಖೆ ಕೂಡ ತೀವ್ರಗೊಂಡಿದ್ದು, ವಿರೋಧ ಪಕ್ಷಗಳು ಸಿಎಂ ಸಿದ್ದರಾಮಯ್ಯ ರಾಜೀನಾಮಗೆ ಆಗ್ರಹಿಸುತ್ತಲೇ ಇದ್ದಾರೆ. ನಿನ್ನೆ ಕೂಡ ಸಿಎಂ ಸಿದ್ದರಾಮಯ್ಯ ರಾಜಿನಾಮೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆಗ್ರಹಿಸಿದ್ದರು.

WhatsApp Group Join Now
Telegram Group Join Now
Share This Article