ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ವಿರುದ್ಧ ಅಲ್ಲಿನ ನ್ಯಾಯಾಲಯವು ಬಂಧನ ವಾರೆಂಟ್ ಹೊರಡಿಸಿದೆ. ಶೇಖ್ ಹಸೀನಾ ಅವರು ಆಗಸ್ಟ್ 5 ರಂದು ದೇಶದ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿ ತಮ್ಮ ಸಹೋದರಿ ಶೇಖ್ ರೆಹಾನಾ ಅವರೊಂದಿಗೆ ಬಾಂಗ್ಲಾದೇಶವನ್ನು ತೊರೆದು ಭಾರತಕ್ಕೆ ಬಂದಿದ್ದರು.
ಆದರೆ ಅಷ್ಟರಲ್ಲಿ ಶೇಖ್ ಹಸೀನಾರ ಸಂಕಷ್ಟ ಹೆಚ್ಚಿದೆ. ಬಾಂಗ್ಲಾದೇಶದ ನ್ಯಾಯಾಲಯ ಅರೆಸ್ಟ್ ವಾರೆಂಟ್ ಹೊರಡಿಸಿದೆ. ಬಾಂಗ್ಲಾದೇಶ ನ್ಯಾಯಾಲಯವು ಶೇಖ್ ಹಸೀನಾ ವಿರುದ್ಧ ಇಂದು ಅಕ್ಟೋಬರ್ 17 ಗುರುವಾರ ಬಂಧನ ವಾರಂಟ್ ಹೊರಡಿಸಿದೆ. ಬಾಂಗ್ಲಾದೇಶದ ಅಂತಾರಾಷ್ಟ್ರೀಯ ಕ್ರಿಮಿನಲ್ ಟ್ರಿಬ್ಯೂನಲ್ನ ಮುಖ್ಯ ಪ್ರಾಸಿಕ್ಯೂಟರ್ ಮೊಹಮ್ಮದ್ ತಾಜುಲ್ ಇಸ್ಲಾಂ ಈ ಬಂಧನ ವಾರಂಟ್ ಕುರಿತು ಮಾಹಿತಿ ನೀಡಿದರು.