ಪೊಲೀಸ್ ಮಕ್ಕಳಿಗಾಗಿ 7 ಪಬ್ಲಿಕ್ ಶಾಲೆ: ಸಿದ್ದರಾಮಯ್ಯ ಘೋಷಣೆ

Ravi Talawar
ಪೊಲೀಸ್ ಮಕ್ಕಳಿಗಾಗಿ 7 ಪಬ್ಲಿಕ್ ಶಾಲೆ: ಸಿದ್ದರಾಮಯ್ಯ ಘೋಷಣೆ
WhatsApp Group Join Now
Telegram Group Join Now

ಬೆಂಗಳೂರು, ಅಕ್ಟೋಬರ್​ 21: ಪೊಲೀಸರು ಮುಕ್ತವಾಗಿ, ಸ್ವತಂತ್ರವಾಗಿ ಕೆಲಸ ಮಾಡಲು ನಮ್ಮ ಸರ್ಕಾರ ಸಂಪೂರ್ಣ ಸಹಕಾರ ನೀಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಪೊಲೀಸ್ ಸಂಸ್ಮರಣಾ ದಿನದಂದು ಹುತಾತ್ಮ ಪೊಲೀಸ್ ಸಿಬ್ಬಂದಿಗೆ ನಮನ ಸಲ್ಲಿಸಿ ಮಾತನಾಡಿದರು.

ಕಳೆದ ಒಂದು ವರ್ಷದಲ್ಲಿ ದೇಶದಲ್ಲಿ 216 ಮಂದಿ, ರಾಜ್ಯದಲ್ಲಿ 12 ಮಂದಿ ಪೊಲೀಸ್ ಸಿಬ್ಬಂದಿ ಮತ್ತು ಅಧಿಕಾರಿಗಳು ಕರ್ತವ್ಯದ ಮೇಲಿದ್ದಾಗಲೇ ಹುತಾತ್ಮರಾಗಿದ್ದಾರೆ. ಇವರ ಆತ್ಮಕ್ಕೆ ನಾನು ಶಾಂತಿ ಕೋರುತ್ತಲೇ ಕುಟುಂಬದವರ ದುಃಖದಲ್ಲಿ ಭಾಗಿ ಆಗುತ್ತೇನೆ. ದೇಶದಲ್ಲಿ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಾಗ, ಜನರ ಪ್ರಾಣ, ಮಾನ ಕಾಪಾಡುವ ಹೊತ್ತಲ್ಲಿ ಇವರೆಲ್ಲ ಹುತಾತ್ಮರಾಗಿದ್ದಾರೆ ಎಂದರು.

 

WhatsApp Group Join Now
Telegram Group Join Now
Share This Article