ಅನರ್ಹರ ಬಳಿ 14 ಲಕ್ಷ ಪಡಿತರ ಕಾರ್ಡ್​! ರದ್ದಾಗಲಿದೆ ಇನ್ನಷ್ಟು ಮಂದಿಯ ರೇಷನ್

Ravi Talawar
ಅನರ್ಹರ ಬಳಿ 14 ಲಕ್ಷ ಪಡಿತರ ಕಾರ್ಡ್​! ರದ್ದಾಗಲಿದೆ ಇನ್ನಷ್ಟು ಮಂದಿಯ ರೇಷನ್
WhatsApp Group Join Now
Telegram Group Join Now

ಬೆಂಗಳೂರು, ಅಕ್ಟೋಬರ್ 22: ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ರಾಜ್ಯದಲ್ಲಿ ಸುಮಾರು 14 ಲಕ್ಷ ಅನರ್ಹ ಪಡಿತರ ಚೀಟಿಗಳನ್ನು ಗುರುತಿಸಿದೆ ಎಂದು ಸಚಿವ ಕೆಎಚ್ ಮುನಿಯಪ್ಪ ಮಾಹಿತಿ ನೀಡಿದ್ದಾರೆ. ಅವರು ನೀಡಿದ ಮಾಹಿತಿಯ ಪ್ರಕಾರ, ಅಧಿಕಾರಿಗಳು 13.87 ಲಕ್ಷ ಅನರ್ಹ ಕಾರ್ಡ್‌ಗಳನ್ನು ಗುರುತಿಸಿದ್ದು, ಅವುಗಳಲ್ಲಿ 3.64 ಲಕ್ಷ ರದ್ದುಗೊಳಿಸಲಾಗಿದೆ. ಇದರಲ್ಲಿ ಸರ್ಕಾರಿ ನೌಕರರ 2,964 ಕಾರ್ಡ್‌ಗಳನ್ನು ರದ್ದುಗೊಳಿಸಲಾಗಿದೆ.

6 ತಿಂಗಳವರೆಗೆ ಪಡಿತರ ಪಡೆಯದಿರುವವರು, ಒಂದು ವರ್ಷದವರೆಗೆ ನೇರ ನಗದು ವರ್ಗಾವಣೆ ಸೌಲಭ್ಯ ಪಡೆಯದಿರುವವರು ಮತ್ತು ನಿಗದಿಪಡಿಸಿದ್ದಕ್ಕಿಂತ ಹೆಚ್ಚಿನ ವಾರ್ಷಿಕ ಆದಾಯ ಹೊಂದಿರುವವರನ್ನು ಅನರ್ಹರೆಂದು ಪರಿಗಣಿಸಲಾಗುತ್ತಿದೆ. ಅನರ್ಹ ಪಡಿತರ ಚೀಟಿಗಳ ಸಂಖ್ಯೆ 20 ಲಕ್ಷಕ್ಕಿಂತ ಹೆಚ್ಚಿರಬಹುದು ಎಂದು ಸಚಿವರು ಅಂದಾಜಿಸಿದ್ದಾರೆ.

WhatsApp Group Join Now
Telegram Group Join Now
Share This Article