ಕರ್ನಾಟಕದ ಬೀಚ್ ಗಳಲ್ಲಿ ಟೆಂಟ್, ಮದ್ಯ ಮಾರಾಟ, ಮದ್ಯಪಾನ ಪಾರ್ಟಿಗೆ ಶೀಘ್ರದಲ್ಲೇ ತೀರ್ಮಾನ!

Ravi Talawar
ಕರ್ನಾಟಕದ ಬೀಚ್ ಗಳಲ್ಲಿ ಟೆಂಟ್, ಮದ್ಯ ಮಾರಾಟ, ಮದ್ಯಪಾನ ಪಾರ್ಟಿಗೆ ಶೀಘ್ರದಲ್ಲೇ ತೀರ್ಮಾನ!
WhatsApp Group Join Now
Telegram Group Join Now

ಮಂಗಳೂರು: ರಾಜ್ಯದಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸಲು ಗೋವಾದ ಮಾದರಿಯಲ್ಲಿ ರಾಜ್ಯದ ಬೀಚ್‌ಗಳಲ್ಲಿ ಟೆಂಟ್ ಹಾಕುವುದು ಮತ್ತು ಮದ್ಯ ಮಾರಾಟ, ಮದ್ಯಪಾನಕ್ಕೆ ಅನುಮತಿ ನೀಡುವ ಪ್ರಸ್ತಾವನೆಯನ್ನು ಪರಿಶೀಲಿಸಲಾಗುತ್ತಿದೆ ಎಂದು ಪ್ರವಾಸೋದ್ಯಮ ಇಲಾಖೆ ತಿಳಿಸಿದೆ.

ಮಂಗಳೂರಿನಲ್ಲಿ ನಡೆದ ‘ಕನೆಕ್ಟ್ 2024’ನಲ್ಲಿ ಮಾತನಾಡಿದ ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕ ರಾಜೇಂದ್ರ ಕೆವಿ, ಗೋವಾ ಮಾದರಿಯಲ್ಲಿ ಪ್ರವಾಸಿಗರನ್ನು ಆಕರ್ಷಿಸಲು ನಾವು ಬೀಚ್‌ಗಳಲ್ಲಿ ಕೆಲವು ಬದಲಾವಣೆಗಳನ್ನು ಮಾಡಬೇಕಾಗಿದೆ , ಬೀಚ್​ ಗಳಲ್ಲಿ ಮದ್ಯ ಬಳಕೆಯ ಮೇಲೆ ಇರುವ ನಿರ್ಬಂಧಗಳನ್ನು ಸಡಿಲಿಸುವ ಅಗತ್ಯವಿದೆ ಎಂದರು.

ಬೀಚ್​ ಗಳಲ್ಲಿ ಸುರಕ್ಷತೆಯನ್ನು ಹೆಚ್ಚಿಸಲು, ಜನರು ರಾತ್ರಿಯಲ್ಲಿ ಹೆಚ್ಚು ಸಮಯ ಕಳೆಯುವಂತೆ ಮಾಡಲು ಕಡಲತೀರಗಳಲ್ಲಿ ಹೆಚ್ಚಿನ ಲೈಟ್​ ಗಳನ್ನು ಅಳವಡಿಸಲು ಇಲಾಖೆ ಚಿಂತನೆ ನಡೆಸಿದೆ. ರಾಜ್ಯದಲ್ಲಿ ಟೆಂಟ್ ಪ್ರವಾಸೋದ್ಯಮವನ್ನು ಉತ್ತೇಜಿಸಲು ಕಡಲತೀರಗಳ ಬಳಿ ಸರ್ಕಾರಿ ಮತ್ತು ಖಾಸಗಿ ಜಮೀನುಗಳನ್ನು ಹುಡುಕುವಂತೆ ಜಿಲ್ಲಾ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಅವರು ಹೇಳಿದರು.

WhatsApp Group Join Now
Telegram Group Join Now
Share This Article