ಮರುಕುಂಬಿ ಗ್ರಾಮದಲ್ಲಿ ದಲಿತರ ಗುಡಿಸಲು ಸುಟ್ಟ ಪ್ರಕರಣ; 101 ಆರೋಪಿಗಳಿಗೆ ಅಕ್ಟೋಬರ್ 24 ರಂದು ಶಿಕ್ಷೆ ಪ್ರಕಟ

Ravi Talawar
ಮರುಕುಂಬಿ ಗ್ರಾಮದಲ್ಲಿ ದಲಿತರ ಗುಡಿಸಲು ಸುಟ್ಟ ಪ್ರಕರಣ; 101 ಆರೋಪಿಗಳಿಗೆ ಅಕ್ಟೋಬರ್ 24 ರಂದು ಶಿಕ್ಷೆ ಪ್ರಕಟ
WhatsApp Group Join Now
Telegram Group Join Now

ಕೊಪ್ಪಳ: ಇಡೀ ದೇಶದ ಗಮನ ಸೆಳೆದಿದ್ದ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಮರುಕುಂಬಿ ಗ್ರಾಮದಲ್ಲಿ ದಲಿತರ ಗುಡಿಸಲುಗಳಿಗೆ ಅನ್ಯ ಸಮುದಾಯದವರು ಬೆಂಕಿ ಹಚ್ಚಿದ ಘಟನೆಯಲ್ಲಿ ಆರೋಪಿಗಳಾಗಿರುವ 101 ಮಂದಿಗೆ ಶಿಕ್ಷೆ ನೀಡಲು ನ್ಯಾಯಾಲಯ ಸಜ್ಜಾಗಿದ್ದು ಗುರುವಾರ ಶಿಕ್ಷೆ ಪ್ರಕಟವಾಗಲಿದೆ.

ಈ ಘಟನೆ 2014ರಲ್ಲಿ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು. ಗ್ರಾಮದ ಹೋಟೆಲ್‌ಗಳು ಮತ್ತು ಕ್ಷೌರಿಕ ಅಂಗಡಿಗಳಲ್ಲಿ ದಲಿತರಿಗೆ ಪ್ರವೇಶ ನಿರಾಕರಿಸಿದ್ದಕ್ಕೆ ಸಂತ್ರಸ್ತರು ಮತ್ತು ಆರೋಪಿಗಳ ನಡುವೆ ಘರ್ಷಣೆ ನಡೆದಿತ್ತು. ಹಲವು ದಲಿತ ಮುಖಂಡರು ಕೊಪ್ಪಳ ಜಿಲ್ಲೆಯಿಂದ ಬೆಂಗಳೂರಿಗೆ ಪಾದಯಾತ್ರೆ ಕೈಗೊಂಡಿದ್ದರು.

ಈ ಪ್ರಕರಣದಲ್ಲಿ ಆರಂಭದಲ್ಲಿ 117 ಮಂದಿ ವಿರುದ್ಧ ಕೇಸ್ ದಾಖಲಿಸಲಾಗಿತ್ತು. ಅವರಲ್ಲಿ ಕೆಲವರು ಸಾವನ್ನಪ್ಪಿದ್ದರೆ, 100 ಆರೋಪಿಗಳನ್ನು ಬಂಧಿಸಲಾಗಿದೆ. ಓರ್ವ ಆರೋಪಿ ಇನ್ನೂ ನಾಪತ್ತೆಯಾಗಿದ್ದು, ಆತನಿಗಾಗಿ ಪೊಲೀಸರು ಶೋಧ ನಡೆಸಿದ್ದಾರೆ. 101 ಮಂದಿಗೆ ಏಕಕಾಲದಲ್ಲಿ ಶಿಕ್ಷೆ ವಿಧಿಸುತ್ತಿರುವುದು ಜಿಲ್ಲೆಯ ಇತಿಹಾಸದಲ್ಲಿ ಇದೇ ಮೊದಲು.

WhatsApp Group Join Now
Telegram Group Join Now
Share This Article