ಮಂಗಳೂರು, (ಅಕ್ಟೋಬರ್ 24): ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿಗೆ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಅವರು ಗೆಲುವು ಸಾಧಿಸಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ರಾಜು ಪೂಜಾರಿ ವಿರುದ್ಧ 1,697 ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಕೋಟ ಶ್ರೀನಿವಾಸ ಪೂಜಾರಿ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನವನ್ನು ಮತ್ತೆ ಬಿಜೆಪಿ ಕಬಳಿಸುವಲ್ಲಿ ಯಶಸ್ವಿಯಾಗಿದೆ.