ನವದೆಹಲಿ, : ಸುಪ್ರೀಂ ಕೋರ್ಟ್ನ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ ಸಂಜೀವ್ ಖನ್ನಾ ಅವರನ್ನು ನೇಮಕ ಮಾಡಲಾಗಿದೆ.
ಈಗಿರುವ ಸಿಜೆಐ ಡಿ.ವೈ.ಚಂದ್ರಚೂಡ್ ಅವರು ನಿವೃತ್ತಿಯಾಗುತ್ತಿರುವ ಹಿನ್ನೆಲೆಯಲ್ಲಿ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರನ್ನು ನೂತನ ಸಿಜೆಐ ಆಗಿ ನೇಮಕ ಮಾಡಿ ಕೇಂದ್ರ ಸರ್ಕಾರ ಇಂದು (ಅಕ್ಟೋಬರ್ 24) ಅಧಿಸೂಚನೆ ಹೊರಡಿಸಿದೆ
. ಇನ್ನು ಸಂಜೀವ್ ಖನ್ನಾ ಅವರು ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿಯಾಗಿ ನವೆಂಬರ್ 11ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.