ಡಾನಾ ಚಂಡಮಾರುತ ಉಗ್ರ ಸ್ವರೂಪ; ಭಾರಿ ಮಳೆ, ಹಲವೆಡೆ ಭೂಕುಸಿತ!

Ravi Talawar
ಡಾನಾ ಚಂಡಮಾರುತ ಉಗ್ರ ಸ್ವರೂಪ; ಭಾರಿ ಮಳೆ, ಹಲವೆಡೆ ಭೂಕುಸಿತ!
WhatsApp Group Join Now
Telegram Group Join Now

ಭುವನೇಶ್ವರ, ಅಕ್ಟೋಬರ್ 25: ಒಡಿಶಾ ಹಾಗೂ ಪಶ್ಚಿಮ ಬಂಗಾಳದಲ್ಲಿ ಡಾನಾ ಚಂಡಮಾರುತ ಉಗ್ರ ಸ್ವರೂಪ ತಾಳಿದೆ. ಗುರುವಾರ ತಡರಾತ್ರಿ ಡಾನಾ ಚಂಡಮಾರುತ ಒಡಿಶಾ ಕರಾವಳಿಗೆ ಅಪ್ಪಳಿಸಿದ್ದು, ಆ ಸಮಯದಲ್ಲಿ ಗಾಳಿಯ ವೇಗ ಗಂಟೆಗೆ 110-120 ಕಿಲೋಮೀಟರ್ ಆಗಿತ್ತು. ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಚಂಡಮಾರುತದ ಪರಿಣಾಮ ಒಡಿಶಾ, ಪಶ್ಚಿಮ ಬಂಗಾಳ ಮಾತ್ರವಲ್ಲದೆ ಅನೇಕ ರಾಜ್ಯಗಳಲ್ಲಿ ಕಂಡುಬಂದಿದೆ.

300 ಕ್ಕೂ ಹೆಚ್ಚು ರೈಲುಗಳು ರದ್ದು: ದಾನಾ ಚಂಡಮಾರುತವು ಪಶ್ಚಿಮ ಬಂಗಾಳದಲ್ಲೂ ಭಾರಿ ಹಾನಿಯನ್ನು ಉಂಟುಮಾಡಿದೆ. ಸಿಎಂ ಮಮತಾ ಬ್ಯಾನರ್ಜಿ ರಾತ್ರಿಯಿಡೀ ಜಾಗರಣೆ ಮಾಡಿ ಪರಿಸ್ಥಿತಿ ಅವಲೋಕಿಸಿದರು. ಪಶ್ಚಿಮ ಬಂಗಾಳ, ಒಡಿಶಾ ಮತ್ತು ಛತ್ತೀಸ್‌ಗಢದ ಮೂಲಕ ಹಾದುಹೋಗುವ 300 ಕ್ಕೂ ಹೆಚ್ಚು ರೈಲುಗಳನ್ನು ರದ್ದುಗೊಳಿಸಲಾಗಿದೆ.

WhatsApp Group Join Now
Telegram Group Join Now
Share This Article