ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಪ್ರಕರಣ 2009ರಿಂದ ಇದೆ: ಗೃಹ ಸಚಿವ ಜಿ ಪರಮೇಶ್ವರ್

Ravi Talawar
ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಪ್ರಕರಣ 2009ರಿಂದ ಇದೆ: ಗೃಹ ಸಚಿವ ಜಿ ಪರಮೇಶ್ವರ್
WhatsApp Group Join Now
Telegram Group Join Now

ಬೆಂಗಳೂರು: ಮುಡಾ ಹಗರಣದಲ್ಲಿ ಹೈಕೋರ್ಟ್ ನೀಡಿರುವ ಆದೇಶವನ್ನು ಮರುಪರಿಶೀಲಿಸುವಂತೆ ಸಿಎಂ ಸಿದ್ದರಾಮಯ್ಯ ಅರ್ಜಿ ಸಲ್ಲಿಸಿದ ಬಗ್ಗೆ ಪ್ರತಿಕ್ರಿಯೆ ನೀಡಿದ ಪರಮೇಶ್ವರ್, ಕಾನೂನು ಚೌಕಟ್ಟನಲ್ಲಿ ಅದಕ್ಕೆ ಅವಕಾಶವಿದೆ, ಹಾಗಾಗಿ ಸಿಂಗಲ್ ಬೆಂಚ್ ನೀಡಿದ ತೀರ್ಪನ್ನು ಮರುಪರಿಶೀಲಿಸುವಂತೆ ಡಬಲ್ ಬೆಂಚ್​ಗೆ ಅರ್ಜಿ ಸಲ್ಲಿಸಿದ್ದಾರೆ ಎಂದರು.

ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಗೃಹ ಸಚಿವ ಜಿ ಪರಮೇಶ್ವರ್ ಅವರು ನಿನ್ನೆ ಬಂಧನಕ್ಕೊಳಗಾಗಿರುವ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಪ್ರಕರಣ 2009ರಿಂದ ನಡೆದಿದ್ದು ಹಿಂದೆಯೂ ಅವರನ್ನು ಅರೆಸ್ಟ್ ಮಾಡಲಾಗಿತ್ತು ಎಂದು ಹೇಳಿದರು. ಅಕ್ರಮ ಗಣಿಕೆಗಾರಿಕೆ ನಡೆಸಿದ ಮತ್ತು ಬೆಳೆಕೇರಿ ಪೋರ್ಟ್​ನಲ್ಲಿ ಲಕ್ಷಾಂತರ ಟನ್ ಕಬ್ಬಿಣದ ಅದಿರು ಅಕ್ರಮವಾಗಿ ಸಂಗ್ರಹಿಟ್ಟ ಆರೋಪ ಅವರ ಮೇಲಿದೆ. ಪ್ರಕರಣದಲ್ಲಿ ವಿಚಾರಣೆ ಮುಂದುವರಿಸಿರುವ ನ್ಯಾಯಾಲಯವು ಸೈಲ್ ಮತ್ತು ಇತರ 9 ಜನರ ಬಂಧನಕ್ಕೆ ಆದೇಶ ನೀಡಿದೆ ಎಂದು ಪರಮೇಶ್ವರ್ ಹೇಳಿದರು.

 

WhatsApp Group Join Now
Telegram Group Join Now
Share This Article