ಅತಿವೃಷ್ಟಿಯ ವಿಪತ್ತು ನಿರ್ವಹಣೆಗೆ ಅಧಿಕಾರಿಗಳಿಗೆ ಹೆಚ್ಚಿನ ಅಧಿಕಾರ: ಡಿಸಿಎಂ ಡಿಕೆಶಿ

Ravi Talawar
ಅತಿವೃಷ್ಟಿಯ ವಿಪತ್ತು ನಿರ್ವಹಣೆಗೆ ಅಧಿಕಾರಿಗಳಿಗೆ ಹೆಚ್ಚಿನ ಅಧಿಕಾರ: ಡಿಸಿಎಂ ಡಿಕೆಶಿ
WhatsApp Group Join Now
Telegram Group Join Now

ಬೆಂಗಳೂರು: ಕೆರೆಗಳ ನಡುವೆ ಸಂಪರ್ಕ, ರಾಜಕಾಲುವೆ ಪಕ್ಕ 50 ಅಡಿ ಅಂತರದಲ್ಲಿ ಕಟ್ಟಡ ನಿರ್ಮಾಣಕ್ಕೆ ತಡೆ, ರಾಜಕಾಲುವೆ ಪಕ್ಕದಲ್ಲಿ 300 ಕಿ.ಮೀ. ಉದ್ದದ ರಸ್ತೆ ನಿರ್ಮಾಣ ಕಾರ್ಯ, ಚರಂಡಿಗಳ ಹೂಳೆತ್ತುವುದು, ಅನಧಿಕೃತ ಕಟ್ಟಗಳ ಸಮೀಕ್ಷೆ ಹಾಗೂ ತೆರವು, ಕಾನೂನು ತಿದ್ದುಪಡಿ ಅಥವಾ ಸುಗ್ರೀವಾಜ್ಞೆ ಮೂಲಕ ಅಧಿಕಾರಿಗಳಿಗೆ ಹೆಚ್ಚಿನ ಅಧಿಕಾರ ನೀಡಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು.

ಅತಿವೃಷ್ಟಿ ವಿಪತ್ತು ನಿರ್ವಹಣೆ ಹಾಗೂ ಇತರ ವಿಷಯಗಳ ಕುರಿತು ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಗುರುವಾರ ಬಿಬಿಎಂಪಿ ಅಧಿಕಾರಿಗಳ ಜತೆ ತುರ್ತು ಸಭೆ ನಡೆಸಿದರು. ನಂತರ ಮಾಧ್ಯಮಗೋಷ್ಠಿ ನಡೆಸಿ, ನಿರ್ಣಯಗಳು ಹಾಗೂ ಅಧಿಕಾರಿಗಳಿಗೆ ನೀಡಿರುವ ಸೂಚನೆಗಳ ಬಗ್ಗೆ ಮಾಹಿತಿ ನೀಡಿದರು.

ಎಲ್ಲ ಕೆರೆಗಳ ನಡುವೆ ಸಂಪರ್ಕ ಏರ್ಪಡಿಸಿ ಮಳೆ ನೀರು ಸರಾಗವಾಗಿ ಹರಿಯುವಂತೆ ಮಾಡಲು ಮಾಸ್ಟರ್ ಪ್ಲಾನ್ ಸಿದ್ಧಪಡಿಸಲು ಸೂಚಿಸಲಾಗಿದೆ. ಬರಗಾಲದಲ್ಲಿ ಕೆರೆಗಳು ಬತ್ತಿ ಹೋಗಿದ್ದವು. ಕೆರೆಗಳು ತುಂಬಬೇಕು, ಅಂತರ್ಜಲ ಪುನಶ್ಚೇತನಗೊಳ್ಳಬೇಕು. ಹೀಗಾಗಿ ಈ ಕ್ರಮ ಕೈಗೊಳ್ಳಲಾಗುತ್ತಿದೆ. ಕೆರೆಗಳಿಗೆ ಕೊಳಚೆ ನೀರನ್ನು ಹರಿಸಬಾರದು. ಕೇವಲ ಮಳೆ ನೀರು ಹೋಗುವಂತೆ ನೋಡಿಕೊಳ್ಳಬೇಕು. ಹೀಗಾಗಿ ಕೆರೆಗಳ ನಡುವೆ ಸಂಪರ್ಕ ಸಾಧಿಸಲು ಯೋಜನೆ ರೂಪಿಸಲು ಸೂಚಿಸಿದ್ದೇನೆ ಎಂದು ಹೇಳಿದ

WhatsApp Group Join Now
Telegram Group Join Now
Share This Article