ಹುಬ್ಬಳ್ಳಿ: ಶಿಗ್ಗಾವಿ-ಸವಣೂರ ವಿಧಾನಸಭಾ ಮತ ಕ್ಷೇತ್ರದ ಅಭಿವೃದ್ಧಿ, ಶಿಕ್ಷಣ, ಆರೋಗ್ಯಕ್ಕೆ ಒತ್ತುಕೊಡುವೆ. ನಾರಿಶಕ್ತಿ, ಯುವಕರ ಪರವಾಗಿ ಹಾಗೂ ರೈತರ ಆದಾಯ ಹೆಚ್ಚಿಸುವ ನಿಟ್ಟಿನಲ್ಲಿ ಕಾರ್ಯ ಮಾಡುವೆ ಎಂದು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭರತ ಬೊಮ್ಮಾಯಿ ಹೇಳಿದರು.
ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕ್ಷೇತ್ರದ ಹಿಂದಿನ ಶಾಸಕರಾದ ನಮ್ಮ ತಂದೆಯವರು ಮಾಡಿದ ಅಭಿವೃದ್ಧಿ ಕೆಲಸಗಳು ಮತ್ತು ಅವರು ಕಂಡ ಕನಸುಗಳನ್ನು ನನಸು ಮಾಡುವೆ. ಜೊತೆಗೆ ನನ್ನದೆಯಾದ ಆಲೋಚನೆಗಳನ್ನು ಹೊಂದಿರುವೆ ಎಂದರು.
ಇದು ಪ್ರಜಾಪ್ರಭುತ್ವ ಎಲ್ಲರೂ ಸ್ಪರ್ಧಿಸಬಹುದು. ನನ್ನ ವಿರುದ್ಧ ಯಾರೇ ಸ್ಪರ್ಧಿಸಿರಲಿ. ಆದರೆ ಕ್ಷೇತ್ರದ ಅಭಿವೃದ್ಧಿಗೆ ಒತ್ತು ಕೊಡುವೆ ಎಂದರು. ಇಂದು ಬಿಜೆಪಿಯ ಹಿರಿಯ ಮುಖಂಡರೊಂದಿಗೆ ಬೃಹತ್ ರೋಡ್ ಶೋ ಮೂಲಕ ನಾಮಪತ್ರ ಸಲ್ಲಿಸುವೆ. ಗುರುವಾರ ಮುಹೂರ್ತ ಹಿನ್ನೆಲೆ ಹಾಗೂ ತಂದೆ-ತಾಯಿ ಮತ್ತು ಪಕ್ಷದ ಹಿರಿಯರ ಆಶೀರ್ವಾದದೊಂದಿಗೆ ನಾಮಪತ್ರ ಸಲ್ಲಿಸಿದ್ದೇನೆ ಎಂದರು.