ನಾಮಪತ್ರ ಹಿಂಪಡೆಯುವಂತೆ ಖಾದ್ರಿ ಮನವೊಲಿಸಿದ ಸಿಎಂ ಸಿದ್ದರಾಮಯ್ಯ

Ravi Talawar
ನಾಮಪತ್ರ ಹಿಂಪಡೆಯುವಂತೆ ಖಾದ್ರಿ ಮನವೊಲಿಸಿದ ಸಿಎಂ ಸಿದ್ದರಾಮಯ್ಯ
WhatsApp Group Join Now
Telegram Group Join Now

ಬೆಂಗಳೂರು/ಹಾವೇರಿತೀವ್ರ ಕುತೂಹಲ ಕೆರಳಿಸಿದ್ದ ಹಾವೇರಿ ಜಿಲ್ಲೆ ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಅಜ್ಜಂಫೀರ್ ಖಾದ್ರಿ ರಾತ್ರೋರಾತ್ರಿ ಬೆಂಗಳೂರುಗೆ ಪಯಣಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಪಕ್ಕಾ ಬೆಂಬಲಿಗರಾಗಿರುವ ಅಜ್ಜಂಫೀರ್ ಖಾದ್ರಿ ಸಿದ್ದರಾಮಯ್ಯ ಭೇಟಿ ಮಾಡಿದ್ದಾರೆ. ಈ ಸಂದರ್ಭದಲ್ಲಿ ಸಚಿವ ಜಮೀರ್ ಅಹ್ಮದ್ ಸೇರಿದಂತೆ ವಿವಿಧ ಮುಖಂಡರು ಉಪಸ್ಥಿತರಿದ್ದರು.

ಶಿಗ್ಗಾವಿ ಕ್ಷೇತ್ರದಿಂದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಸಲ್ಲಿಸಿರುವ ನಾಮಪತ್ರ ವಾಪಸ್ ಪಡೆಯುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಜ್ಜಂಪೀರ್ ಖಾದ್ರಿ ಮನವೊಲಿಸಿದ್ದಾರೆ. ಅಜ್ಜಂಫೀರ್ ಖಾದ್ರಿ ಮನವೊಲೈಕೆ ಯಶಸ್ವಿಯಾಗಿದ್ದು, ಅಖಾಡದಿಂದ ಹಿಂದೆ ಸರಿಯುವುದು ಬಹುತೇಕ ಖಚಿತವಾದಂತಾಗಿದೆ. ಇದರಿಂದ ಭರತ್ ಬೊಮ್ಮಾಯಿಗೆ ಗೆಲುವು ಮತ್ತಷ್ಟು ಕಷ್ಟಕರವಾಗಲಿದೆ ಎನ್ನಲಾಗುತ್ತಿದೆ. ಅಜ್ಜಂಫೀರ್ ಖಾದ್ರಿಗೆ ಎಂಎಲ್​ಸಿ ಸ್ಥಾನ ಸೇರಿದಂತೆ ಸೂಕ್ತ ಸ್ಥಾನಮಾನ ನೀಡುವ ಭರವಸೆ ನೀಡಲಾಗಿದೆ.

ಶಿಗ್ಗಾಂವಿ ಉಪ ಚುನಾವಣೆಯಲ್ಲಿ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿರುವ ಅಜ್ಜಂ ಪೀರ್ ಖಾದ್ರಿ ಅವರನ್ನು ಸಚಿವ ಜಮೀರ್ ಅಹಮದ್ ಖಾನ್ ಕಾವೇರಿ ನಿವಾಸಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿ ಕರೆದುಕೊಂಡು ಬಂದರು.‌ ಇದೇ ವೇಳೆ, ಸಿಎಂ ಸಿದ್ದರಾಮಯ್ಯ ನಾಮಪತ್ರ ವಾಪಸು ಪಡೆಯುವಂತೆ ಮನವೊಲಿಕೆ ಮಾಡಿದರು.‌ ಟಿಕೆಟ್ ನೀಡದೇ ಇರುವುದಕ್ಕೆ ಅಸಮಾಧಾನ ಹೊರಹಾಕಿದ ಖಾದ್ರಿ, ಸಿಎಂ ಮನವೊಲಿಕೆಗೆ ಒಪ್ಪಿ ನಾಮಪತ್ರ ಹಿಂಪಡೆಯುವ ಭರವಸೆ ನೀಡಿದ್ದಾರೆ.

WhatsApp Group Join Now
Telegram Group Join Now
Share This Article