ವಿಜಯಪುರ, ಅಕ್ಟೋಬರ್ 29: ವಿಜಯಪುರ ಜಿಲ್ಲೆಯಲ್ಲಿ ವಕ್ಫ್ಆಸ್ತಿ ವಿವಾದ ಜೋರಾಗಿದೆ. ವಕ್ಫ್ ಆಸ್ತಿ ವಿಚಾರವಾಗಿ ಜಿಲ್ಲೆಯ ಹಲವು ರೈತರಿಗೆ ತಹಶೀಲ್ದಾರ್ ಕಚೇರಿಯಿಂದ ನೋಟಿಸ್ ನೀಡಲಾಗಿದೆ. ರೈತರಿಗೆ ನೋಟಿಸ್ ನೀಡಿದ್ದಕ್ಕೆ ವಿಪಕ್ಷ ಬಿಜೆಪಿ (ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಿಹಾಯುತ್ತಿದೆ. ಇದೀಗ, ಬಿಜೆಪಿ ಸರ್ಕಾರದ ಅವಧಿಯಲ್ಲೂ ರೈತರಿಗೆ ವಕ್ಫ್ನಿಂದ ನೋಟಿಸ್ ನೀಡಲಾಗಿದೆ ಎಂದು ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂಬಿ ಪಾಟೀಲ್ ದಾಖಲೆ ಸಮೇತ ಟಾಂಗ್ ಕೊಟ್ಟಿದ್ದಾರೆ.
ಬಿಜೆಪಿ ಅವಧಿಯಲ್ಲೂ ರೈತರಿಗೆ ನೋಟಿಸ್; ದಾಖಲೆ ಸಮೇತ ಗುಡುಗಿದ ಎಂಬಿ ಪಾಟೀಲ್
ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಟ್ವೀಟ್ ಮಾಡಿದ ಸಚಿವ ಎಂ.ಬಿ ಪಾಟೀಲ್ “2019ರಿಂದ 2022ರವರೆಗೆ ರಾಜ್ಯದಲ್ಲಿ ಆಡಳಿತ ನಡೆಸಿದ ಆಪರೇಷನ್ ಕಮಲದ ಸರ್ಕಾರದ ಅವಧಿಯಲ್ಲಿ ವಕ್ಫ್ ಬೋರ್ಡ್ ವಿಜಯಪುರದ ರೈತರಿಗೆ ನೀಡಿದ ನೋಟೀಸುಗಳಿವು! ಆಗ ಇರದ ಹಿಂದೂ ಪ್ರೇಮ ಈಗ ಕಪೋಲ ಕಲ್ಪಿತ ಸುಳ್ಳುಗಳ ಆಧಾರದ ಮೇಲೆ ಚಿಗುರೊಡೆದಿದ್ದು ಹೇಗೆ?” ಎಂದು ವಾಗ್ದಾಳಿ ಮಾಡಿದ್ದಾರೆ.