ವೃತ್ತಿಪರ ಕೋರ್ಸ್​ಗಳ ನೋಂದಣಿಗೆ ಆಧಾರ್​ ಲಿಂಕ್ಡ್​ ಕಡ್ಡಾಯ: ಕೆಇಎ ಪ್ರಸ್ತಾವನೆ

Ravi Talawar
ವೃತ್ತಿಪರ ಕೋರ್ಸ್​ಗಳ ನೋಂದಣಿಗೆ ಆಧಾರ್​ ಲಿಂಕ್ಡ್​ ಕಡ್ಡಾಯ: ಕೆಇಎ ಪ್ರಸ್ತಾವನೆ
WhatsApp Group Join Now
Telegram Group Join Now

ಬೆಂಗಳೂರು: ಮುಂದಿನ ವರ್ಷದಿಂದ ಎಲ್ಲಾ ವೃತ್ತಿಪರ ಕೋರ್ಸ್​ಗಳ ನೋಂದಣಿಯನ್ನು ವಿದ್ಯಾರ್ಥಿಗಳ ಆಧಾರ್​ನೊಂದಿಗೆ ಲಿಂಕ್ ಮಾಡಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಪ್ರಸ್ತಾಪಿಸಿದೆ. ಸೀಟ್​ ಬ್ಲಾಕಿಂಗ್ ದಂಧೆಯನ್ನು ಪರಿಣಾಮಕಾರಿಯಾಗಿ ತಡೆಗಟ್ಟಲು ಪ್ರಾಧಿಕಾರವು ಇಂಥದೊಂದು ಕ್ರಮಕ್ಕೆ ಮುಂದಾಗಿದೆ. ಕೆಇಎ ಈ ಪ್ರಸ್ತಾವನೆಯನ್ನು ಈಗಾಗಲೇ ಇ-ಆಡಳಿತ ಇಲಾಖೆಗೆ ಸಲ್ಲಿಸಿದೆ.

ಭಾರತ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ: ಇ-ಆಡಳಿತ ಇಲಾಖೆಯು ನಮ್ಮ ಪ್ರಸ್ತಾಪದ ಪರವಾಗಿದೆ ಮತ್ತು ಅವರು ಅನುಮೋದನೆಗಾಗಿ ನಮ್ಮ ಪ್ರಸ್ತಾಪವನ್ನು ಭಾರತ ಸರ್ಕಾರಕ್ಕೆ ಕಳುಹಿಸಿದ್ದಾರೆ. ಶೀಘ್ರದಲ್ಲೇ ಅನುಮೋದನೆ ಸಿಗಬಹುದು ಎಂಬ ನಿರೀಕ್ಷೆಯಲ್ಲಿದ್ದೇವೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ಪಿಟಿಐಗೆ ತಿಳಿಸಿದ್ದಾರೆ.

ವಂಚನೆ ತಡೆಯುವ ಉದ್ದೇಶದಿಂದ ಈ ಕ್ರಮ: “ಅಧಿಕೃತತೆಯನ್ನು ಖಚಿತಪಡಿಸಿಕೊಳ್ಳಲು, ನೋಂದಣಿಯಲ್ಲಿ ಯಾವುದೇ ವಂಚನೆಯನ್ನು ತಡೆಗಟ್ಟಲು ಮತ್ತು ವಿದ್ಯಾರ್ಥಿಗಳು ತಮ್ಮ ಮೊಬೈಲ್ ಫೋನ್​ಗಳಲ್ಲಿಯೇ ಪರೀಕ್ಷೆಗೆ ಸಂಬಂಧಿಸಿದ ಮಾಹಿತಿಯನ್ನು ಪಡೆಯಲು ಅನುಕೂಲವಾಗುವಂತೆ ಆಧಾರ್-ಲಿಂಕ್ಡ್ ನೋಂದಣಿಯನ್ನು ಪ್ರಸ್ತಾಪಿಸಲಾಗಿದೆ” ಎಂದು ಅವರು ಹೇಳಿದರು.

ವಿವಿಧ ಇಲಾಖೆಗಳಿಗೆ ಕೆಇಎ ನಡೆಸುವ ನೇಮಕಾತಿ ಪರೀಕ್ಷೆಗಳಿಗೂ ಆಧಾರ್ ಲಿಂಕ್ ಮಾಡಿದ ನೋಂದಣಿಯನ್ನು ಪರಿಚಯಿಸುವ ಯೋಜನೆಯೂ ಇದೆ ಎಂದು ಪ್ರಸನ್ನ ಹೇಳಿದರು.

WhatsApp Group Join Now
Telegram Group Join Now
Share This Article