ಬೆಂಗಳೂರು, ಅಕ್ಟೋಬರ್ 30: ಸಾಮೂಹಿಕ ನಕಲು ತಡೆಯುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ವೆಬ್ ಕಾಸ್ಟಿಂಗ್ ಮೊರೆ ಹೋಗಿತ್ತು. ಇದೀಗ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ (ಕೆಎಸ್‌ಇಎಬಿ) ಈ ವರ್ಷದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕೂಡ ವೆಬ್ಕಾಸ್ಟಿಂಗ್ಗೆ ಮುಂದಾಗಿದೆ.
ದ್ವಿತೀಯ ಪಿಯುಸಿ ಪರೀಕ್ಷೆಯಲ್ಲೂ ವೆಬ್ ಕಾಸ್ಟಿಂಗ್ : ಸಾಮೂಹಿಕ ನಕಲು ತಡೆಯಲು ಮತ್ತು ಪಾರದರ್ಶಕತೆ ಮೂಲಕ ಪರೀಕ್ಷಾ ಅಕ್ರಮಗಳನ್ನು ತಡೆಗಟ್ಟುವ ನಿಟ್ಟನಲ್ಲಿ ಶಿಕ್ಷಣ ಇಲಾಖೆ ಕಳೆದ ವರ್ಷದ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ವೆಬ್ ಕಾಸ್ಟಿಂಗ್ ಪರಿಚಯಿಸಲಾಗಿತ್ತು. ಹಾಗಾಗಿ ಮಾರ್ಚ್-ಏಪ್ರಿಲ್ 2025 ರಲ್ಲಿ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕೂಡ ಅದೇ ವ್ಯವಸ್ಥೆಯನ್ನು ಅನುಸರಿಸಲಾಗುತ್ತಿದೆ.