ಮುಡಾ ಸೈಟ್​ ಹಿಂಪಡೆಯಲು ಸಿದ್ದರಾಮಯ್ಯ ಸಮ್ಮತಿ!

Ravi Talawar
ಮುಡಾ ಸೈಟ್​ ಹಿಂಪಡೆಯಲು ಸಿದ್ದರಾಮಯ್ಯ ಸಮ್ಮತಿ!
WhatsApp Group Join Now
Telegram Group Join Now

ಮೈಸೂರು, ಅಕ್ಟೋಬರ್​ 31: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ನಿವೇಶನ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಹಗರಣ ತಿರುವು ಪಡೆದುಕೊಂಡಿದೆ.

ಮುಡಾದಿಂದ ಹಂಚಿಕೆಯಾಗಿದ್ದ ನಿವೇಶನಗಳನ್ನು ರದ್ದುಗೊಳಿಸುವಂತೆ ಬಿಜೆಪಿ ಶಾಸಕ  ಬರೆದಿದ್ದ ಪತ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮ್ಮತಿ ಸೂಚಿಸಿದ್ದಾರೆ. ಮುಡಾ ಹಗರಣ ಪತಿಗೆ ಕಂಟಕವಾಗಿ ಪರಿಣಮಿಸುತ್ತಿದ್ದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪತ್ನಿ ಪಾರ್ವತಿಯವರು ಮುಡಾದಿಂದ ಹಂಚಿಕೆಯಾಗಿದ್ದ ನಿವೇಶನಗಳನ್ನು ವಾಪಸ್​ ನೀಡಿದ್ದರು.

50:50 ಅನುಪಾತದ ನಿವೇಶನಗಳನ್ನು ಹಿಂಪಡೆಯಲು ಅಗತ್ಯ ಕ್ರಮಕೈಗೊಳ್ಳಿ ಎಂದು ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿಗೆ ಲಿಖಿತ ಸೂಚನೆ ನೀಡಿದ್ದಾರೆ. ಇದರಿಂದ 50:50 ಅನುಪಾತದಲ್ಲಿ ನಿವೇಶನ ಪಡೆದವರಿಗೆ ಟೆನ್ಷನ್ ಶುರುವಾಗಿದೆ.
WhatsApp Group Join Now
Telegram Group Join Now
Share This Article