ಬೆಂಗಳೂರು : ಕರ್ನಾಟಕದ ಹಲವು ಭಾಗಗಳಲ್ಲಿ ಕೊಂಚ ಕೂಡ ಬಿಡುವು ಕೊಡದೆ ಮಳೆಯಾಗುತ್ತಿದೆ. ನವೆಂಬರ್ 9ರ ಬಳಿಕ ಮಳೆ ಮತ್ತಷ್ಟು ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ರಾಯಚೂರು, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದೆ ಎಚ್ಎಎಲ್ನಲ್ಲಿ 29.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 30.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 30.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.