ವೈಷಮ್ಯದ ಹಿನ್ನೆಲೆ ಯುವಕನ ಹತ್ಯೆ

Ravi Talawar
ವೈಷಮ್ಯದ ಹಿನ್ನೆಲೆ ಯುವಕನ ಹತ್ಯೆ
WhatsApp Group Join Now
Telegram Group Join Now

ಬೆಳಗಾವಿ: ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿ ದುಷ್ಕರ್ಮಿಗಳ ತಂಡ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಬರ್ಬರವಾಗಿ ಹತ್ಯೆಗೈದ ಘಟನೆ ಬೈಲಹೊಂಗಲ ಪಟ್ಟಣದಲ್ಲಿ ನಡೆದಿದೆ.

ಆಶ್ರಯ ಕಾಲೊನಿ ಶಾಲಾ ಮೈದಾನದಲ್ಲಿ ನಿನ್ನೆ ರಾತ್ರಿ ಘಟನೆ ನಡೆದಿದೆ. ರವಿ ತಿಮ್ಮನ್ನವರ(23) ಹತ್ಯೆಯಾದವರು. ಕುಡಗೋಲು, ಮದ್ಯದ ಬಾಟಲಿಯಿಂದ ಹೊಡೆದು ಕೊಲೆ ಮಾಡಲಾಗಿದೆ.

13ಕ್ಕೂ ಹೆಚ್ಚು ದುಷ್ಕರ್ಮಿಗಳ ತಂಡ ದಾಳಿ ಮಾಡಿದೆ ಎಂದು ತಿಳಿದು ಬಂದಿದೆ. ಗಂಭೀರವಾಗಿ ಗಾಯಗೊಂಡ ಯುವಕನನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ರಕ್ತ ಮಡುವಿನಲ್ಲಿ ಪ್ರಜ್ಞೆತಪ್ಪಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾನೆ.

ಘಟನಾ ಸ್ಥಳಕ್ಕೆ ಬೈಲಹೊಂಗಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೈಲಹೊಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳಿಗೆ ಪೊಲೀಸರು ಶೋಧ ನಡೆಸುತ್ತಿದ್ದಾರೆ.
WhatsApp Group Join Now
Telegram Group Join Now
Share This Article