ಬೆಂಗಳೂರು, ನವೆಂಬರ್ 6: ಕರ್ನಾಟಕ ಬಕಾರಿ ಇಲಾಖೆಯು ಮದ್ಯದಂಗಡಿಗಳಿಂದ ‘ಮಂಥ್ಲಿ ಮನಿ’ ಹೆಸರಿನಲ್ಲಿ ಲಂಚ ಪಡೆಯುತ್ತಿದೆ ಎಂಬ ಆರೋಪ ಕೇಳಿಬಂದ ಬೆನ್ನಲ್ಲೇ ಈ ವಿಚಾರವಾಗಿ ಪ್ರತಿಪಕ್ಷ ನಾಯಕ ಆರ್ ಅಶೋಕ್ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ಬೆಂಗಳೂರಿನಲ್ಲಿ ರೌಡಿಗಳು ಹಫ್ತಾ ವಸೂಲಿ ಮಾಡುತ್ತಿದ್ದರು ಈಗ ಈ ಸರ್ಕಾರದ ಸಚಿವರು ಹಫ್ತಾ ವಸೂಲಿಗೆ ಇಳಿದಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ನಮ್ಮ ವಿರುದ್ಧ ಹಿಂದೆ ಪೇಸಿಎಂ ಪೋಸ್ಟರ್ ಅಂಟಿಸಿದ್ದಿರಿ. ಆಗ ನಾವು ನಿಮ್ಮನ್ನು ಸನ್ಮಾನ ಮಾಡಲು ಆಗಲಿಲ್ಲ. ಈಗ ಪೇಸಿಎಂ ಪೋಸ್ಟರ್ ಅಂಟಿಸಿದಾಗ ಹೇಳಿ ಬಂದು ಸನ್ಮಾನ ಮಾಡುತ್ತೇವೆ ಎಂದು ಅಶೋಕ್ ವ್ಯಂಗ್ಯವಾಡಿದರು.