ಕೇರಳದ ದಕ್ಷಿಣ ಕರಾವಳಿ ಹಾಗೂ ಶ್ರೀಲಂಕಾದಿಂದ ದೂರದಲ್ಲಿ ಆಗ್ನೇಯ ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತ ಪರಿಚಲನೆ ಸೃಷ್ಟಿಯಾಗಿದೆ. ಹೀಗಾಗಿ ಕರ್ನಾಟಕ, ಕೇರಳ, ಆಂಧ್ರಪ್ರದೇಶ, ತಮಿಳುನಾಡು ಸೇರಿದಂತೆ ಹಲವು ರಾಜ್ಯಗಳಲ್ಲಿ ಮಳೆಯಾಗುವ ಸಾಧ್ಯತೆ ಹೆಚ್ಚಿದೆ.
ಕಾರ್ಕಳ, ಶಿರಾಲಿ, ಧರ್ಮಸ್ಥಳ, ಕೊಟ್ಟಿಗೆಹಾರ, ಭಾಗಮಂಡಲ, ಉಪ್ಪಿನಂಗಡಿ, ಪುತ್ತೂರು, ಉಡುಪಿ, ಮಾಣಿ, ಸೋಮವಾರಪೇಟೆ, ಪೊನ್ನಂಪೇಟೆ, ಶೃಂಗೇರಿಯಲ್ಲಿ ಮಳೆಯಾಗಿದೆ. ಕಾರವಾರದಲ್ಲಿ 14.5 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 14.5 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.