ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಹವಾಮಾನ ವೈಪರೀತ್ಯ ಸಾಮಾನ್ಯವಾಗಿದೆ. ಚಳಿಗಾಲದಲ್ಲಿ ಮಳೆ, ಮಳೆಗಾಲದಲ್ಲಿ ಬಿಸಿಲು ಸಹಜವಾಗಿದೆ.
ಇದೀಗ ಮಳೆಗಾಲ ಮುಗಿದು ಚಳಿಗಾಲ ಆರಂಭವಾಗಿದ್ದರೂ ರಾಜಧಾನಿ ಬೆಂಗಳೂರು, ಕರಾವಳಿ ಜಿಲ್ಲೆಗಳು ಸೇರಿದಂತೆ ಬಹುತೇಕ ಕಡೆಗಳಲ್ಲಿ ಮಳೆಯ ಪ್ರಮಾಣ ಜೋರಿತ್ತು. ಆದರೆ ಕಳೆದ ಎರಡು ದಿನಗಳಿಂದ ವರುಣರಾಯ ಬಿಡುವು ಪಡೆದಿದ್ದಾನೆ.
ಇಂದು (ನವೆಂಬರ್ 7) ಕೂಡ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಮತ್ತೊಂದು ಚಂಡಮಾರುತದ ಮುನ್ಸೂಚನೆ ಇರುವ ಕಾರಣ ನಾಳೆಯಿಂದ (ನವೆಂಬರ್ 8) ಪುನಃ ರಾಜ್ಯದಲ್ಲಿ ಮಳೆಯಾಗುವ ಮುನ್ಸೂಚನೆ ಇದೆ ಎನ್ನಲಾಗುತ್ತಿದೆ.
ಕರ್ನಾಟಕದ ಕರಾವಳಿ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನಲ್ಲಿ ಒಣ ಹವೆ ಇರಲಿದ್ದು, ಕೆಲವೆಡೆ ಚಳಿಯು ಶುರುವಾಗಿದೆ. ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ. ಹಾಗಾದರೆ ರಾಜ್ಯದ ಯಾವೆಲ್ಲಾ ಜಿಲ್ಲೆಗಳಲ್ಲಿ ಮಳೆ ಇದೆ.