ನಾನು ಆರ್ಥಿಕ ಶಕ್ತಿ ಕೇಂದ್ರೀಕರಣದ ವಿರೋಧಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ

Ravi Talawar
ನಾನು ಆರ್ಥಿಕ ಶಕ್ತಿ ಕೇಂದ್ರೀಕರಣದ ವಿರೋಧಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ
WhatsApp Group Join Now
Telegram Group Join Now

ನವದೆಹಲಿ, ನವೆಂಬರ್ 8: ತನ್ನನ್ನು ಬಿಸಿನೆಸ್ ವಿರೋಧಿ ಎಂದು ತಪ್ಪಾಗಿ ಬಿಂಬಿಸಲಾಗುತ್ತಿದೆ. ಆದರೆ, ತಾನು ಬಿಸಿನೆಸ್ ವಿರೋಧಿಯಲ್ಲ. ಆದರೆ, ಆರ್ಥಿಕ ಶಕ್ತಿಯ ಕೇಂದ್ರೀಕರಣದ ವಿರೋಧಿ, ಬಿಸಿನೆಸ್ ಏಕಸ್ವಾಮ್ಯದ ವಿರೋಧಿ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸ್ಪಷ್ಟಪಡಿಸಿದ್ದಾರೆ. ಸರ್ಕಾರ ಕೆಲವೇ ಉದ್ಯಮಿಗಳನ್ನು ಪ್ರೋತ್ಸಾಹಿಸುತ್ತದೆ ಎಂಬುದು ರಾಹುಲ್ ಗಾಂಧಿ ಸದಾ ಮಾಡುತ್ತಿರುವ ಆರೋಪ. ಆದರೆ, ಗೌತಮ್ ಅದಾನಿ, ಮುಕೇಶ್ ಅಂಬಾನಿ ಅವರತ್ತ ರಾಹುಲ್ ಆಗಾಗ್ಗೆ ಬೊಟ್ಟು ಮಾಡುತ್ತಲೇ ಇರುತ್ತಾರೆ. ಸಂಪತ್ತು ಮರುಹಂಚಿಕೆ ಬಗ್ಗೆ ಮಾತನಾಡುತ್ತಿರುತ್ತಾರೆ. ಅಂತೆಯೇ, ರಾಹುಲ್ ಗಾಂಧಿ ಉದ್ಯಮ ಮತ್ತು ಉದ್ಯಮಿಗಳ ವಿರೋಧಿ ಎನ್ನುವಂತಹ ಟೀಕೆಗಳೂ ಸಾಕಷ್ಟು ಕೇಳಿಬರುತ್ತಲೇ ಇವೆ. ಈ ಕಾರಣಕ್ಕೆ ರಾಹುಲ್ ಗಾಂಧಿ ನಿನ್ನೆ ವಿಡಿಯೋ ಸಂದೇಶವೊಂದನ್ನು ಸೋಷಿಯಲ್ ಮೀಡಿಯಾದಲ್ಲಿ ಪ್ರಕಟಿಸಿದ್ದು, ತಾನು ಬಿಸಿನೆಸ್ ವಿರೋಧಿ ಅಲ್ಲ ಎಂದು ಸ್ಪಷ್ಟಪಡಿಸುವ ಪ್ರಯತ್ನ ಮಾಡಿದ್ದಾರೆ.

WhatsApp Group Join Now
Telegram Group Join Now
Share This Article