ಬೆಳಗಾವಿ, ನವೆಂಬರ್ 16: ಕುಂದಾ ನಗರಿ ಬೆಳಗಾವಿಯಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿದೆ. ಬೆಳಗಾವಿಯ ವಡ್ಡರವಾಡಿಯಲ್ಲಿ ವೇಶ್ಯಾವಾಟಿಕೆಯ ಆರೋಪ ಹೊರಿಸಿ ಮಾಡಿದ್ದಲ್ಲದೆ, ಸಾರ್ವಜನಿಕವಾಗಿ ಬಟ್ಟೆ ಹರಿದು ಹಾಕಲಾಗಿದೆ.
ನೆರೆ ಮನೆಯವರೇ ಹಲ್ಲೆ ಮಾಡಿದ್ದಾರೆ ಎನ್ನಲಾಗಿದ್ದು, ಕೃತ್ಯದ ವಿಡಿಯೋ ಮೊಬೈಲ್ ಫೋನ್ ಕ್ಯಾಮರಾದಲ್ಲಿ ಸೆರೆಯಾಗಿದೆ. ಆರಂಭದಲ್ಲಿ ದೂರು ದಾಖಲಿಸಲು ಪೊಲೀಸರು ಹಿಂದೇಟು ಹಾಕಿದ್ದರು ಎಂಬ ಆರೋಪವೂ ಕೇಳಿ ಬಂದಿದ್ದು, ಸದ್ಯ ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳಗಾವಿಯ ವಡ್ಡರವಾಡಿಯ ಮನೆಯೊಂದರಲ್ಲಿ ಬಾಲಕಿಯೊಬ್ಬಳ ಜತೆ ನಾಲ್ವರು ನಾಲ್ಕು ವರ್ಷಗಳಿಂದ ವಾಸವಾಗಿದ್ದಾರೆ. ಅಲ್ಲೇ ಪಕ್ಕದಲ್ಲಿ ವಾಸವಿರುವ ಮತ್ತೊಂದು ಕುಟುಂಬದವರು, ಮಹಿಳೆಯ ವಿರುದ್ಧ ವೇಶ್ಯಾವಾಟಿಕೆಯ ಆರೋಪ ಮಾಡಿದ್ದಾರೆ. ಅಷ್ಟೇ ಅಲ್ಲದೆ, ಮನೆಗೆ ನುಗ್ಗಿ ತಾಯಿ, ಮಗಳನ್ನು ಹೊರಗೆ ಎಳೆದು ತಂದು ಹಲ್ಲೆ ಮಾಡಿ ಅಟ್ಟಹಾಸ ಮೆರೆದಿದ್ದಾರೆ.