ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಭಾನುವಾರ ಸೊಲ್ಲಾಪುರದ ಶಿವಯೋಗ ಆಶ್ರಮಕ್ಕೆ ಭೇಟಿ ನೀಡಿ, ರಾಷ್ಟ್ರಸಂತ ಡಾ.ಬಸವಲಿಂಗ ಸ್ವಾಮಿಗಳ ಆಶೀರ್ವಾದ ಹಾಗೂ ಮಾರ್ಗದರ್ಶನ ಪಡೆದರು.
ಈ ವೇಳೆ ಉಪ ಮುಖ್ಯ ಮಂತ್ರಿಗಳಾದ ಡಿ.ಕೆ. ಶಿವಕುಮಾರ, ಸೊಲ್ಲಾಪುರ ಉತ್ತರ ಕ್ಷೇತ್ರದ ಮಾಜಿ ಶಾಸಕರಾದ ವಿಶ್ವನಾಥ್ ಚಾಕೋತೆ ಮೊದಲಾದವರು ಉಪಸ್ಥಿತರಿದ್ದರು.