ಮಧ್ಯಪ್ರದೇಶ: ಯುವಕನೊಬ್ಬ ಮಹಿಳಾ ಪೊಲೀಸ್ ಅಧಿಕಾರಿಗೆ ಕಪಾಳಮೋಕ್ಷ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮಧ್ಯಪ್ರದೇಶದ ಟಿಕಮ್‌ಗಢ್ ಜಿಲ್ಲೆಯಲ್ಲಿ ಸೋಮವಾರ ಈ ಘಟನೆ ನಡೆದಿದ್ದು, ಜಿಲ್ಲೆಯ ಪೊಲೀಸ್ ಇಲಾಖೆಯಲ್ಲಿ ಸಂಚಲನ ಮೂಡಿಸಿದೆ.
ಮಾಹಿತಿ ಪಡೆದ ಬಡಗಾಂವ್ ಪೊಲೀಸ್ ಠಾಣೆ ಪ್ರಭಾರಿ ಅನು ಮೇಘಾ ಗುಪ್ತಾ ದುಬೆ ಘಟನಾ ಸ್ಥಳಕ್ಕೆ ಆಗಮಿಸಿ ರಸ್ತೆ ತಡೆ ತೆರವುಗೊಳಿಸಿದ್ದರು.ಆದರೆ, ಪರಿಸ್ಥಿತಿ ವಿಕೋಪಕ್ಕೆ ಹೋಗಿದ್ದು, ವಾಗ್ವಾದದ ನಡುವೆ ಮಹಿಳಾ ಪೊಲೀಸ್ ಅಧಿಕಾರಿ ಯುವಕನಿಗೆ ಕಪಾಳಮೋಕ್ಷ ಮಾಡಿದ್ದಾರೆ. ಇದರಿಂದ ಕೋಪಗೊಂಡ ಯುವಕ ಪೊಲೀಸ್ ಎಂದೂ ಕೂಡ ನೋಡದೇ ತಿಗುರಿಸಿ ಕೆನ್ನೆಗೆ ಹೊಡೆದಿದ್ದಾನೆ. ಈ ಘಟನೆಯಿಂದ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಪೊಲೀಸರು ಮಧ್ಯ ಪ್ರವೇಶಿಸಿ ಘಟನಾ ಸ್ಥಳವನ್ನು ನಿಯಂತ್ರಿಸಿದ್ದಾರೆ.