ಮೂರು ಕ್ಷೇತ್ರಗಳನ್ನು ಕಾಂಗ್ರೆಸ್ ವಶಕ್ಕೆ ಪಡೆದಿದೆ

Ravi Talawar
ಮೂರು ಕ್ಷೇತ್ರಗಳನ್ನು ಕಾಂಗ್ರೆಸ್ ವಶಕ್ಕೆ ಪಡೆದಿದೆ
WhatsApp Group Join Now
Telegram Group Join Now

ಬೆಂಗಳೂರು: ರಾಜ್ಯದ ಮೂರು ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆಯಲ್ಲಿ ಮೂರು ಕ್ಷೇತ್ರಗಳನ್ನು ಕಾಂಗ್ರೆಸ್ ವಶಕ್ಕೆ ಪಡೆದಿದೆ. ಶಿಗ್ಗಾಂವಿ, ಸಂಡೂರು ಮತ್ತು ಚನ್ನಪಟ್ಟಣ ಕ್ಷೇತ್ರದಲ್ಲಿ ಕಾಂಗ್ರೆಸ್ ಜಯಭೇರಿ ಸಾಧಿಸಿದೆ.

ಚನ್ನಪಟ್ಟಣ ಜಿದ್ದಾಜಿದ್ದಿ: ಚನ್ನಪಟ್ಟಣದಲ್ಲಿ ಎನ್​ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಮತ್ತು ಕಾಂಗ್ರೆಸ್ ಅಭ್ಯರ್ಥಿ ಸಿ. ಪಿ. ಯೋಗೇಶ್ವರ್ ಮಧ್ಯೆ ನೇರ ಪೈಪೋಟಿ ಉಂಟಾಗಿತ್ತು. ಅಂತಿಮ ಸುತ್ತಿನ ಬಳಿಕ ಜೆಡಿಎಸ್​ ಹಾಗೂ ಬಿಜೆಪಿ ಮೈತ್ರಿ ಅಭ್ಯರ್ಥಿ ನಿಖಿಲ್​ ಕುಮಾರಸ್ವಾಮಿ ಅವರು 82229 ಮತ ಪಡೆದು ಸೋತರು. ಕಾಂಗ್ರೆಸ್​ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್​ ಅವರು 112642 ಮತಗಳನ್ನು ಗಳಿಸಿ, 25413 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ.

ಶಿಗ್ಗಾಂವಿ ಕಣ: ಈ ಕ್ಷೇತ್ರದಲ್ಲಿ ಎನ್​ಡಿಎ ಅಭ್ಯರ್ಥಿ ಭರತ್ ಬೊಮ್ಮಾಯಿ ಮತ್ತು ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಖಾನ್ ಪಠಾಣ್ ಮಧ್ಯೆ ಸ್ಪರ್ಧೆ ಇತ್ತು. 12ನೇ ಸುತ್ತಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ 12,251 ಮತಗಳಿಂದ ಮುಂದಿದ್ದರು. ಬಳಿಕ 14ನೇ ಸುತ್ತಿನ ಮತ ಎಣಿಕೆ ಮುಕ್ತಾಯದ ವೇಳೆಗೆ ಕಾಂಗ್ರೆಸ್ 83,400 ಮತ, ಬಿಜೆಪಿಯು 69972 ಪಡೆದಿದೆ. ಈ ಮೂಲಕ ಯಾಸೀರ್ ಖಾನ್ ಪಠಾಣ್ 13,428 ಮುನ್ನಡೆ ಸಾಧಿಸಿದ್ದರು. ಶಿಗ್ಗಾಂವಿಯಲ್ಲಿ 16ನೇ ಸುತ್ತಿನಲ್ಲಿ ಕಾಂಗ್ರೆಸ್ 13448 ಮುನ್ನಡೆ ಸಾಧಿಸಿದೆ. ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಖಾನ್ ಪಠಾಣ್ 93,234 ಮತ ಪಡೆದರೆ, ಬಿಜೆಪಿಯ ಭರತ್ ಬೊಮ್ಮಾಯಿಗೆ 79,756 ಮತಗಳು ಬಂದಿವೆ. ಯಾಸೀರ್ ಪಠಾಣ್ ಗೆದ್ದಿದ್ದು, ಭರತ್ ಬೊಮ್ಮಾಯಿ ಸೋಲನುಭವಿಸಿದ್ದಾರೆ.

ಸಂಡೂರಲ್ಲಿ ಎನ್​ಡಿಎ ಅಭ್ಯರ್ಥಿ ಬಂಗಾರು ಹನಮಂತು ಮತ್ತು ಕಾಂಗ್ರೆಸ್​ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಮಧ್ಯೆ ನೇರ ಹಣಾಹಣೆ ಉಂಟಾಗಿದೆ.  ಸಂಡೂರಿನಲ್ಲಿ ಅಂತಿಮ ಹಂತದ ಮತ ಎಣಿಕೆ ಮುಗಿದಿದ್ದು, ಕಾಂಗ್ರೆಸ್ 93,616 ಮತ್ತು ಬಿಜೆಪಿ 83967 ಮತ ಪಡೆದಿದೆ. ಅನ್ನಪೂರ್ಣ ತುಕಾರಾಂ 9649 ಮತಗಳ ಅಂತರದಿಂದ ಗೆದ್ದಿದ್ದಾರೆ.

ಮೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆದ್ದ ಬಳಿಕ ಕಾಂಗ್ರೆಸ್ ಕಾರ್ಯಕರ್ತರು ಆಯಾ ಕ್ಷೇತ್ರದಲ್ಲಿ ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ.

 

WhatsApp Group Join Now
Telegram Group Join Now
Share This Article