ಬೆಂಗಳೂರು, ನವೆಂಬರ್ 29: ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಕಳೆದ 15 ದಿನಗಳಲ್ಲಿ ಒಟ್ಟು ಐವರು ಬಾಣಂತಿಯರು ಮೃತಪಟ್ಟಿದ್ದು, ಜನರ ಆಕ್ರೋಶಕ್ಕೆ ಕಾರಣವಾಗುತ್ತಿದ್ದಂತೆ ಸರ್ಕಾರ ತನಿಖೆ ನಡೆಸಲು ಮತ್ತೊಂದು ಸಮಿತಿ ರಚಿಸಿದೆ. ಆದರೆ, ಈ ಹಿಂದೆ ರಚಿಸಲಾಗಿದ್ದ ತನಿಖಾ ಸಮಿತಿ ವರದಿ ಸಿದ್ದಪಡಿಸಿ ಈಗಾಗಲೆ ಸರ್ಕಾರಕ್ಕೆ ನೀಡಿದೆ. ಈ ವರದಿಯನ್ನು ಸರ್ಕಾರ ಗೌಪ್ಯವಾಗಿಟ್ಟಿದ್ದು, ವಿಪಕ್ಷಗಳ ಆಕ್ರೋಶವಕ್ಕೆ ಕಾರಣವಾಗಿದೆ. ಈ ವಿಚಾರವಾಗಿ ವಿಪಕ್ಷ ನಾಯಕ ಆರ್ ಅಶೋಕ್ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.
ಬಳ್ಳಾರಿ ಜಿಲ್ಲಾ ಆಸ್ಪತ್ರೆಯಲ್ಲಿ 5 ಬಾಣಂತಿಯರ ಸಾವು: ಸರ್ಕಾರದ ವಿರುದ್ಧ ಅಶೋಕ್ ಆಕ್ರೋಶ
ಬಳ್ಳಾರಿಯ ಜಿಲ್ಲಾಸ್ಪತ್ರೆ ಹಾಗು ಬಿಮ್ಸ್ ಆಸ್ಪತ್ರೆಯಲ್ಲಿ ಕಳೆದ 10 ದಿನಗಳಲ್ಲಿ 5 ಮಂದಿ ಬಾಣಂತಿಯರ ಸಾವಾಗಿದ್ದು, ಈ ಬಗ್ಗೆ ತಜ್ಞರ ತಂಡ ತನಿಖೆ ಮಾಡಿ ನೀಡಿರುವ ವರದಿಯನ್ನ ಕರ್ನಾಟಕ ಸರ್ಕಾರ ಗೌಪ್ಯವಾಗಿ ಮುಚ್ಚಿಟ್ಟಿರುವುದು ಹಲವಾರು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.” ಎಂದು ಆರ್ ಅಶೋಕ್ ಟ್ವಿಟ್ ಮಾಡಿದ್ದಾರೆ.
“ಈ ಸರಣಿ ಸಾವಿನ ಬೆನ್ನಲ್ಲೇ, ನವೆಂಬರ್ 16ನೆ ತಾರೀಖಿನಂದು ಖಾಸಗಿ ಕಂಪನಿಯೊಂದು ಸರಬರಾಜು ಮಾಡಿರುವ Ringer Lactate Infusion ಔಷದಿಯನ್ನ ಬಳಕೆ ಮಾಡದಂತೆ ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮ ಸುತ್ತೋಲೆ ಹೊರಡಿಸಿದೆ.”