ಪಿಜಿ ವೈದ್ಯಕೀಯ 2ನೇ ಸುತ್ತಿನ ಸೀಟು ಹಂಚಿಕೆ: ದಾಖಲೆ ಸಲ್ಲಿಕೆಗೆ ವೇಳಾಪಟ್ಟಿ ಬಿಡುಗಡೆ

Ravi Talawar
ಪಿಜಿ ವೈದ್ಯಕೀಯ 2ನೇ ಸುತ್ತಿನ ಸೀಟು ಹಂಚಿಕೆ: ದಾಖಲೆ ಸಲ್ಲಿಕೆಗೆ ವೇಳಾಪಟ್ಟಿ ಬಿಡುಗಡೆ
WhatsApp Group Join Now
Telegram Group Join Now

ಬೆಂಗಳೂರು: ಸ್ನಾತಕೋತ್ತರ ವೈದ್ಯಕೀಯ ಕೋರ್ಸ್​ನ ಎರಡನೇ ಸುತ್ತಿನ ಸೀಟು ಹಂಚಿಕೆಯಲ್ಲಿ ಭಾಗವಹಿಸಲು ಇಚ್ಛಿಸುವ ಅರ್ಹರಿಗೆ ಅವರ ರ‍್ಯಾಂಕ್‌ ಆಧಾರದ ಮೇಲೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಕಚೇರಿಯಲ್ಲಿ ಮೂಲ ದಾಖಲೆ ಸಲ್ಲಿಸಲು ಡಿಸೆಂಬರ್ 6ರಿಂದ 17 ರವರೆಗೆ ಅವಕಾಶ ಕಲ್ಪಿಸಲಾಗಿದೆ.

ಮೊದಲ ಸುತ್ತಿನಲ್ಲಿ ಸೀಟು ಹಂಚಿಕೆಯಾಗಿ ಚಾಯ್ಸ್-2 ಆಯ್ಕೆ ಮಾಡಿ ಶುಲ್ಕ ಪಾವತಿಸಿರುವವರು ಹಾಗೂ ಯಾವುದೇ ಸೀಟು ಹಂಚಿಕೆಯಾಗದೇ ಇರುವವರು ಮೂಲ ದಾಖಲೆಗಳನ್ನು ಸಲ್ಲಿಸುವುದು ಕಡ್ಡಾಯ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ.

ಚಾಯ್ಸ್-2 ಮತ್ತು 3 ಅನ್ನು ಆಯ್ಕೆ ಮಾಡಿಕೊಂಡವರು ಡಿಸೆಂಬರ್ 6, 7 ಮತ್ತು 9ರಂದು ದಾಖಲೆ ಸಲ್ಲಿಸಬೇಕು. ಸೀಟು ಹಂಚಿಕೆಯಾಗದವರು ಡಿಸೆಂಬರ್ 10ರಿಂದ 17ರವರಗೆ ದಾಖಲೆ ಸಲ್ಲಿಸಬೇಕು. ನಿಗದಿತ ದಿನಾಂಕಗಳಂದು ಮೂಲ ದಾಖಲೆ ಸಲ್ಲಿಸದಿದ್ದರೆ, 2ನೇ ಸುತ್ತಿನ ಸೀಟು ಹಂಚಿಕೆಗೆ ಅಂತಹವರನ್ನು ಪರಿಗಣಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

WhatsApp Group Join Now
Telegram Group Join Now
Share This Article