ಒಪ್ಪಂದ ಆಗಿದೆ ಎನ್ನುವುದಾದರೆ ನಾವೆಲ್ಲ ಯಾಕಿರಬೇಕು? ಗೃಹ ಸಚಿವ ಸಚಿವ ಜಿ.ಪರಮೇಶ್ವರ್

Ravi Talawar
ಒಪ್ಪಂದ ಆಗಿದೆ ಎನ್ನುವುದಾದರೆ ನಾವೆಲ್ಲ ಯಾಕಿರಬೇಕು? ಗೃಹ ಸಚಿವ ಸಚಿವ ಜಿ.ಪರಮೇಶ್ವರ್
WhatsApp Group Join Now
Telegram Group Join Now

ಬೆಂಗಳೂರು: ”ರಾಜ್ಯದಲ್ಲಿ ಅಧಿಕಾರ ಹಂಚಿಕೆ ಬಗ್ಗೆ ಒಪ್ಪಂದ ಆಗಿರುವ ವಿಚಾರ ನನಗೆ ಗೊತ್ತಿಲ್ಲ. ಒಪ್ಪಂದ ಆಗಿದೆ ಎನ್ನುವುದಾದರೆ ನಾವೆಲ್ಲ ಯಾಕಿರಬೇಕು?. ಅವರಿಬ್ಬರೇ ರಾಜಕಾರಣ ನಡೆಸಲಿ. ಬೇರೆಯವರು ಇರುವುದೇ ಬೇಡವೇ?. ಆ ರೀತಿ ಒಪ್ಪಂದ ಆಗಿರಲು ಸಾಧ್ಯವಿಲ್ಲ” ಎಂದು ಗೃಹ ಸಚಿವ ಸಚಿವ ಜಿ.ಪರಮೇಶ್ವರ್ ಸೂಚ್ಯವಾಗಿ ಪ್ರತಿಕ್ರಿಯಿಸಿದ್ದಾರೆ.

ಸದಾಶಿವನಗರದ ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಹುದ್ದೆ ಒಪ್ಪಂದ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, ”ಈ ಬಗ್ಗೆ ದೆಹಲಿ ಮತ್ತು ರಾಜ್ಯದಲ್ಲಿ ಇಬ್ಬರು, ಮೂವರನ್ನು ಕೇಳಿದ್ದೇನೆ. ಒಪ್ಪಂದ ಆಗಿದೆ ಅಂತ ಯಾರು ಹೇಳಿಲ್ಲ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಯಾವ ಅರ್ಥದಲ್ಲಿ ಹೇಳಿದ್ದಾರೋ ನನಗೆ ಗೊತ್ತಿಲ್ಲ. ಅಂತಹ ಒಪ್ಪಂದ ಆಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗಾಗಲೇ ಸ್ಪಷ್ಟವಾಗಿ ಹೇಳಿದ್ದಾರೆ” ಎಂದರು.

”ಒಪ್ಪಂದ ಆಗಿರಲು ಸಾಧ್ಯವಿಲ್ಲ. ಹೈಕಮಾಂಡ್ ಅಂತಿಮವಾಗಿ ಏನು ತೀರ್ಮಾನ ಮಾಡುತ್ತದೆಯೋ ಅದಕ್ಕೆ ನಾವು ಬದ್ಧವಾಗಿರುತ್ತೇವೆ. ನಾವ್ಯಾರೂ ಕೂಡ ಹೈಕಮಾಂಡ್ ಅನ್ನು ಬಿಟ್ಟು ಹೋದವರಲ್ಲ‌. ಹೈಕಮಾಂಡ್ ಏನು ತೀರ್ಮಾನ ಮಾಡುತ್ತದೆಯೋ ಅದನ್ನು ಒಪ್ಪಿಕೊಳ್ಳುತ್ತೇವೆ” ಎಂದು ತಿಳಿಸಿದರು.

WhatsApp Group Join Now
Telegram Group Join Now
Share This Article