ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗಿಯಾಗಿದ್ದಾರೆ ಎನ್ನಲಾದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣದಲ್ಲಿ ಆರೋಪಿಗಳನ್ನು ಅಡ್ವೊಕೇಟ್ ಜನರಲ್ ರಕ್ಷಿಸುತ್ತಿದ್ದು, ಸರ್ಕಾರದ ಹಿತಾಸಕ್ತಿ ಕಾಪಾಡುತ್ತಿಲ್ಲ ಎಂದು ಶನಿವಾರ ಆರೋಪಿಸಿದ್ದಾರೆ.
ಮೈಸೂರು ನಗರದ ಹೊರವಲಯದ ಕಸಬಾ ಹೋಬಳಿಯ ಕೆಸರೆ ಗ್ರಾಮದ ಸರ್ವೆ ನಂಬರ್ 464ರಲ್ಲಿನ ಆಸ್ತಿಗೆ ಸಂಬಂಧಿಸಿದಂತೆ ನಗರಾಭಿವೃದ್ಧಿ ಕಾರ್ಯದರ್ಶಿಗೆ ನೀಡಿರುವ ಕಾನೂನು ಅಭಿಪ್ರಾಯವನ್ನು ವಿರೋಧಿಸಿ ಸ್ನೇಹಮಯಿ ಕೃಷ್ಣ ಅವರು ಅಡ್ವೊಕೇಟ್ ಜನರಲ್ ಶಶಿ ಕಿರಣ್ ಶೆಟ್ಟಿ ಅವರಿಗೆ ಪತ್ರ ಬರೆದಿದ್ದಾರೆ.
ಅಡ್ವೊಕೇಟ್ ಜನರಲ್ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿಗೆ ನೀಡಿರುವ ಅಭಿಪ್ರಾಯದ ಪ್ರತಿ ತನ್ನ ಬಳಿ ಇದೆ. ಜವಾಬ್ದಾರಿಯುತ ಅಧಿಕಾರಿಯಾಗಿರುವ ನೀವು ಆರೋಪಿಗಳನ್ನು ರಕ್ಷಿಸುವ ಅಭಿಪ್ರಾಯ ನೀಡಿದ್ದೀರಿ. ಕಾನೂನಿನ ಅರಿವಿಲ್ಲದ ವ್ಯಕ್ತಿಯಂತೆ ಸರ್ಕಾರಿ ಆಸ್ತಿ ಸಂರಕ್ಷಣೆ ವಿರುದ್ಧ ಹೋಗಿದ್ದೀರಿ ಮತ್ತು ಈ ಬಗ್ಗೆ ಸ್ಪಷ್ಟೀಕರಣ ಮತ್ತು ಅಧಿಕೃತ ದಾಖಲೆಗಳನ್ನು ಕೇಳುತ್ತಿದ್ದೇನೆ ಎಂದು ಕೃಷ್ಣ ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.