ಬಾಣಂತಿಯರ ಸಾವು ಕೇಸ್‌ : ಐಎಎಸ್‌ ಅಧಿಕಾರಿ ನೇತೃತ್ವದಲ್ಲಿ ಪರಿಶೀಲನಾ ತಂಡ ರಚನೆ

Ravi Talawar
ಬಾಣಂತಿಯರ ಸಾವು ಕೇಸ್‌ : ಐಎಎಸ್‌ ಅಧಿಕಾರಿ ನೇತೃತ್ವದಲ್ಲಿ ಪರಿಶೀಲನಾ ತಂಡ ರಚನೆ
WhatsApp Group Join Now
Telegram Group Join Now

ಬೆಂಗಳೂರು, ಡಿಸೆಂಬರ್​ 08: ಬಳ್ಳಾರಿ ಜಿಲ್ಲಾ ಆಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಐಎಎಸ್ ಅಧಿಕಾರಿ ನೇತೃತ್ವದಲ್ಲಿ ಸರ್ಕಾರ ಪರಿಶೀಲನಾ ತಂಡ ರಚಿಸಿದೆ. ಕೌಶಲ್ಯಾಭಿವೃದ್ಧಿ ನಿಗಮದ ಎಂಡಿ ಎಂ.ಕನಗವಲ್ಲಿ ನೇತೃತ್ವದಲ್ಲಿ ನಾಲ್ವರು ಸದಸ್ಯರ ತಂಡ ರಚಿಸಲಾಗಿದ್ದು, ಐದು ದಿನಗಳಲ್ಲಿ ಸರ್ಕಾರದ ಎಸಿಎಸ್‌ಗೆ ವರದಿ ಸಲ್ಲಿಸುವಂತೆ ಸೂಚನೆ ನೀಡಲಾಗಿದೆ.

ಎಂ.ಕನಗವಲ್ಲಿ ನೇತೃತ್ವದಲ್ಲಿ ತಂಡದಲ್ಲಿ ಔಷಧ ನಿಯಂತ್ರಣ ಇಲಾಖೆಯ ಸಹಾಯಕ ಔಷಧ ನಿಯಂತ್ರಕ ವೆಂಕಟೇಶ್, ಬೆಂಗಳೂರು ವೈದ್ಯಕೀಯ ಕಾಲೇಜಿನ ಮೈಕ್ರೋಬಯೋಲಜಿಸ್ಟ್ ಡಾ. ಅಸೀಮಾ ಬಾನು ಮತ್ತು   ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಉಪ ಕುಲಪತಿಯವರಿಂದ ನಾಮನಿರ್ದೇಶಿತ ಒಬ್ಬ ಹಿರಿಯ ಫಾರ್ಮಾಕಾಲಜಿ (Pharmacology) ಪ್ರಾಧ್ಯಾಪಕರು ಇದ್ದಾರೆ.

ಬಳ್ಳಾರಿ ಜಿಲ್ಲೆಯಲ್ಲಿ ಬಾಣಂತಿಯರ ಸರಣಿ ಸಾವಿನ ಕುರಿತಂತೆ ಹಾಗೂ ಕರ್ನಾಟಕದಲ್ಲಿ ಇದೇ ತರಹದ ಪ್ರಕರಣಗಳು ಮರುಕಳಿಸದಂತೆ ಮೂಲ ವ್ಯವಸ್ಥೆ ಸುಧಾರಣೆಗಳನ್ನು ತರುವ ನಿಟ್ಟಿನಲ್ಲಿ ಸೂಕ್ತ ಶಿಫಾರಸ್ಸಿನೊಂದಿಗೆ ವಿವರವಾದ ವರದಿಯನ್ನು ಸರ್ಕಾರಕ್ಕೆ ಸಲ್ಲಿಸುವ ಸಂಬಂಧ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಮತ್ತು ಅಭಿವೃದ್ಧಿ ಆಯುಕ್ತರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಲಾಗಿದೆ.

WhatsApp Group Join Now
Telegram Group Join Now
Share This Article