ಲಾಠಿಚಾರ್ಜ್ ನಡೆಸಿರುವ ವಿಚಾರ ಸರಿ ಇದೆ: ಸಿಎಂ ಸಿದ್ದರಾಮಯ್ಯ

Ravi Talawar
ಲಾಠಿಚಾರ್ಜ್ ನಡೆಸಿರುವ ವಿಚಾರ ಸರಿ ಇದೆ: ಸಿಎಂ ಸಿದ್ದರಾಮಯ್ಯ
WhatsApp Group Join Now
Telegram Group Join Now

ಬೆಳಗಾವಿ, ಡಿಸೆಂಬರ್ 12: ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿ 2ಎ ಮೀಸಲಾತಿಗಾಗಿ ಹೋರಾಟ ನಡೆಸುತ್ತಿರುವ ಪಂಚಮಸಾಲಿ ಹೋರಾಟಗಾರರ ಮೇಲೆ ಪೊಲೀಸರು ಲಾಠಿಚಾರ್ಜ್ ನಡೆಸಿರುವ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಗುರುವಾರ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರಿಂದ ಮಾಹಿತಿ ಪಡೆದರು. ಲಾಠಿ ಚಾರ್ಜ್ ಕುರಿತು ಸಂಪೂರ್ಣ ಮಾಹಿತಿ ಪಡೆದ ಸಿಎಂ ಸಿದ್ದರಾಮಯ್ಯ, ನೀವು ಮಾಡಿದ್ದು ಸರಿ ಇದೆ ಎಂದರು.

ಹೈಕೋರ್ಟ್ ಹೋರಾಟಕ್ಕೆ ಅನುಮತಿ ನೀಡಿತ್ತು. ಆದರೆ, ಆ ಜಾಗ ಬಿಟ್ಟು ಬೇರೆ ಕಡೆ ಹೋಗದಂತೆ, ಶಾಂತಿಯುತ ಪ್ರತಿಭಟನೆ ಮಾಡುವಂತೆ ಆದೇಶ ಇತ್ತು. ಹೈಕೋರ್ಟ್ ಆದೇಶ ಪಾಲನೆ ಮಾಡಲು ಲಾಠಿ ಚಾರ್ಜ್ ಮಾಡಿದ್ದೇವೆ ಎಂದು ಸಿಎಂ ಅವರ ಮುಂದೆ ಅಧಿಕಾರಿಗಳು ಹೇಳಿದರು.

ಈ ವೇಳೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಹೈಕೋರ್ಟ್ ಆದೇಶ ಪಾಲನೆ ಮಾಡಿದ್ದು ಒಳ್ಳೆಯದು ಎಂದರು. ನಂತರ ಅಧಿಕಾರಿಗಳು ನೀಡಿದ ವಿಡಿಯೋ ಹಾಗೂ ಹೈಕೋರ್ಟ್ ಆದೇಶದ ಪ್ರತಿ ತೆಗೆದುಕೊಂಡು ಹೋದರು.

ಪ್ರತಿಭಟನಾಕಾರರ ಮೇಲೆ ಲಾಠಿಚಾರ್ಜ್​ ಅನ್ನು ಗೃಹ ಸಚಿವ ಡಾ. ಜಿ ಪರಮೇಶ್ವರ ಸಮರ್ಥಿಸಿಕೊಂಡಿದ್ದಾರೆ. ಈ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಸುಮ್ಮನೆ ನಾವು ಲಾಠಿಚಾರ್ಜ್ ಮಾಡಿಲ್ಲ. ಇದಕ್ಕೆ ಸಂಬಂಧಿಸಿ ನಮ್ಮ ಬಳಿಯೂ ವಿಡಿಯೋ ಹಾಗೂ ಫೋಟೋಗಳಿವೆ. ಪಂಚಮಸಾಲಿ ಹೋರಾಟಗಾರರು ಕಾನೂನು ಕೈಗೆತ್ತಿಕೊಂಡಿದ್ದರು. ಸ್ವತಃ ಸಿಎಂ ಹೋರಾಟ ಸ್ಥಳಕ್ಕೆ ಬರಬೇಕು ಎಂದು ಪಟ್ಟು ಹಿಡಿದರು. ನಾವು ಸಚಿವರನ್ನು ಪ್ರತಿಭಟನೆ ಸ್ಥಳಕ್ಕೆ ಕಳುಹಿಸಿದಾಗಲೂ ಒಪ್ಪಲಿಲ್ಲ ಎಂದು ಹೇಳಿದರು.

WhatsApp Group Join Now
Telegram Group Join Now
Share This Article