ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ರೂಪುಗೊಂಡಿರುವ ಹಿನ್ನೆಲೆಯಲ್ಲಿ ತಮಿಳುನಾಡು, ಕರ್ನಾಟಕದ ಸೇರಿ ಹಲವೆಡೆ ಮಳೆಯಾಗುತ್ತಿದೆ. ಬೆಂಗಳೂರು ಸೇರಿ 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ವಿಜಯನಗರ, ಶಿವಮೊಗ್ಗ, ರಾಮನಗರ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಚಾಮರಾಜನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡದಲ್ಲಿ ಮಳೆಯಾಗಲಿದೆ.
ಹೊನ್ನಾವರದಲ್ಲಿ 34.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 34.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 33.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 33.9ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.