150 ಕೋಟಿ ರೂ. ಆಮಿಷ ಆರೋಪದ ಬಗ್ಗೆ ಸಿಬಿಐ ತನಿಖೆಯಾಗಲಿ: ವಿಜಯೇಂದ್ರ

Ravi Talawar
150 ಕೋಟಿ ರೂ. ಆಮಿಷ ಆರೋಪದ ಬಗ್ಗೆ ಸಿಬಿಐ ತನಿಖೆಯಾಗಲಿ: ವಿಜಯೇಂದ್ರ
WhatsApp Group Join Now
Telegram Group Join Now

ಬೆಳಗಾವಿ, ಡಿಸೆಂಬರ್ 16: ವಕ್ಫ್​ ಆಸ್ತಿ ಕಬಳಿಕೆ ಬಗ್ಗೆ ಅಲ್ಪಸಂಖ್ಯಾತರ ಆಯೋಗದ ಮಾಜಿ‌ ಅಧ್ಯಕ್ಷ ಅನ್ವರ್​ ಮಾಣಿಪ್ಪಾಡಿಗೆ 150 ಕೋಟಿ ರೂ. ಆಮಿಷವೊಡ್ಡಿದ ಆರೋಪದ ಬಗ್ಗೆ ಸಿಬಿಐ ತನಿಖೆಗೆ ವಹಿಸಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆಗ್ರಹಿಸಿದರು.

ತಮ್ಮ ವಿರುದ್ಧ ಸಿಎಂ ಸಿದ್ದರಾಮಯ್ಯ ಹಾಗೂ ಸಚಿವ ಪ್ರಿಯಾಂಕ್ ಖರ್ಗೆ ಮಾಡಿರುವ ಆರೋಪದ ಬಗ್ಗೆ ಬೆಳಗಾವಿ ಅಧಿವೇಶನದಲ್ಲಿ ಮಾತನಾಡಿದ ವಿಜಯೇಂದ್ರ, ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

2016ರಲ್ಲಿ ವಕ್ಫ್ ಆಸ್ತಿ ಕಬಳಿಕೆ ಬಗ್ಗೆ ವರದಿ ನೀಡಿದ್ದರು. ಆದರೆ ಅಂದಿನ ಸಿಎಂ ಉಪಲೋಕಾಯುಕ್ತರ ವರದಿ ಮುಚ್ಚಿ ಹಾಕಿದ್ದರು. ಅಲ್ಪಸಂಖ್ಯಾತರ ಆಯೋಗದ ಹಿಂದಿನ‌ ಅಧ್ಯಕ್ಷರು ಸರ್ಕಾರಕ್ಕೆ ಶಿಫಾರಸು ಸಲ್ಲಿಸಿದ್ದನ್ನು ಸಿದ್ದರಾಮಯ್ಯ ಸಚಿವ ಸಂಪುಟ ತಿರಸ್ಕರಿಸಿತು.
ಸಿಎಂ ಅವರಿಗೆ ಸಿಬಿಐ ಬಗ್ಗೆ ಬಹಳ ವಿಶ್ವಾಸ ಇದೆ. ನಾನು ಸಿಎಂಗೆ ಸವಾಲ್ ಹಾಕುತ್ತೇನೆ, 150 ಕೋ ರೂ. ಟಿ ಆಮಿಷ ಆರೋಪವನ್ನು ಸಿಬಿಐಗೆ ವಹಿಸಲಿ. ಜತೆಗೆ ಅನ್ವರ್ ಮಾಣಿಪ್ಪಾಡಿ ವರದಿಯ ತನಿಖೆಯನ್ನೂ ಸಿಬಿಐಗೆ ಕೊಡಲಿ ಎಂದು ವಿಜಯೇಂದ್ರ ಆಗ್ರಹಿಸಿದರು.

ಹಗರಣಗಳ ಸುಳಿಯಲ್ಲಿ ಸಿಲುಕಿರುವ ಸಿಎಂ ನಮ್ಮ ವಿರುದ್ಧ ಆರೋಪ ಮಾಡುತ್ತಿದ್ದಾರೆ. ಸಿಎಂ ಹಿಟ್ ಅಂಡ್ ರನ್ ಮಾಡುವುದು ಬೇಡ ಎಂದು ವಿಜಯೇಂದ್ರ ಕಿಡಿ ಕಾರಿದರು.

WhatsApp Group Join Now
Telegram Group Join Now
Share This Article