ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ವಿರುದ್ಧ ದೂರು ನೀಡಿದ್ದ ಸ್ನೇಹಮಯಿ ಕೃಷ್ಣ ನಾಪತ್ತೆ

Ravi Talawar
ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ವಿರುದ್ಧ ದೂರು ನೀಡಿದ್ದ ಸ್ನೇಹಮಯಿ ಕೃಷ್ಣ ನಾಪತ್ತೆ
WhatsApp Group Join Now
Telegram Group Join Now

ಬೆಂಗಳೂರು, ಡಿಸೆಂಬರ್​ 17: ಕರ್ನಾಟಕದಲ್ಲಿ ಭಾರಿ ಸದ್ದು ಮಾಡಿದ್ದ ಮುಡಾ ಹಗರಣದ  ಪ್ರಮುಖ ದೂರುದಾರರಾಗಿರುವ ಸ್ನೇಹಮಯಿ ಕೃಷ್ಣ ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿರುವುದು ತಿಳಿದುಬಂದಿದೆ. ಚಾಮುಂಡಿ ಬೆಟ್ಟ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ವಿರುದ್ಧ ಕೆಲವೇ ದಿನಗಳ ಹಿಂದೆ ಸೀರೆ ಕಳ್ಳತನದ ಆರೋಪ ಮಾಡಿದ್ದರು. ಇದರ ಬೆನ್ನಲ್ಲೇ ಕೃಷ್ಣ ವಿರುದ್ಧ ಕೂಡ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ಎಫ್ಐಆರ್ ದಾಖಲಿಸಲಾಗಿತ್ತು. ಈ ಬೆಳವಣಿಗೆಗಳ ಬೆನ್ನಲ್ಲೇ ಅವರು ನಾಪತ್ತೆಯಾಗಿದ್ದಾರೆ. ಇದೀಗ ಪೊಲೀಸರು ಇದೀಗ ಸ್ನೇಹಮಯಿ ಕೃಷ್ಣಗಾಗಿ ಹುಡುಕಾಟ ಆರಂಭಿಸಿದ್ದಾರೆ. ಅವರ ಮೊಬೈಲ್ ಮೂರು ದಿನಗಳಿಂದ ಸ್ವಿಚ್ ಆಫ್ ಆಗಿದೆ ಎನ್ನಲಾಗಿದೆ.

ನಾಡದೇವತೆ ತಾಯಿ ಚಾಮುಂಡೇಶ್ವರಿ ದೇವಿಗೆ ಉಡುಗೊರೆಯಾಗಿ ನೀಡಿದ್ದ ಲಕ್ಷಾಂತರ ರೂ. ಮೌಲ್ಯದ ಸೀರೆಗಳನ್ನು ಚಾಮುಂಡೇಶ್ವರಿ ದೇವಸ್ಥಾನದ ಕಾರ್ಯದರ್ಶಿ ರೂಪಾ ಅವರು ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದಾರೆ ಎಂದು ಸ್ನೇಹಮಯಿ ಕೃಷ್ಣ ಅವರು ಗಂಭೀರ ಆರೋಪ ಮಾಡದ್ದರು. ಈ ಬಗ್ಗೆ ಮೈಸೂರಿನ ಕೃಷ್ಣರಾಜ ಪೊಲೀಸ್ ಠಾಣೆಗೆ ವಿಡಿಯೋ ಸಮೇತ ದೂರು ನೀಡಿದ್ದರು.

WhatsApp Group Join Now
Telegram Group Join Now
Share This Article