ಉತ್ತರ ಕರ್ನಾಟಕದ ಕೆಲವೆಡೆ ಶೀತ ಗಾಳಿ ಜೋರಾಗಿದೆ, ಡಿಸೆಂಬರ್ 20ರಿಂದ ಕೆಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲೂ ಚಳಿಯ ಪ್ರಮಾಣ ಕಡಿಮೆಯಾಗಿದೆ. ಯಾದಗಿರಿ, ವಿಜಯಪುರ, ರಾಯಚೂರು, ಕಲಬುರಗಿ, ಬೀದರ್, ಬಾಗಲಕೋಟೆಯಲ್ಲಿ ಚಳಿ ಹೆಚ್ಚಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಹಾಸನ, ಕೊಡಗು, ಕೋಲಾರ, ರಾಮನಗರದಲ್ಲಿ ಮಳೆಯಾಗಲಿದೆ.
ಹೊನ್ನಾವರದಲ್ಲಿ 33.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 35.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 32.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 33.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.