ಕ್ಷೇತ್ರ ಅಭಿವೃದ್ಧಿಗೆ 2 ಸಾವಿರ ಕೋಟಿ ರೂ. ಅನುದಾನ: ಸಿಎಂ ಭರವಸೆ

Ravi Talawar
ಕ್ಷೇತ್ರ ಅಭಿವೃದ್ಧಿಗೆ 2 ಸಾವಿರ ಕೋಟಿ ರೂ. ಅನುದಾನ: ಸಿಎಂ ಭರವಸೆ
WhatsApp Group Join Now
Telegram Group Join Now

ಬೆಳಗಾವಿ, ಡಿಸೆಂಬರ್​ 18: ಕ್ಷೇತ್ರದ ಅಭಿವೃದ್ಧಿ ಕೆಲಸಗಳಿಗೆ ಹಣ ನೀಡುವಂತೆ ಕೇಳಿದ ಶಾಸಕರಿಗೆ 10 ಕೋಟಿಯಂತೆ ಸುಮಾರು 2000 ಕೋಟಿ ರೂ. ಅನುದಾನ ನೀಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದರು. ಮಂಗಳವಾರ (ಡಿಸೆಂಬರ್​ 17) ರಂದು ಬೆಳಗಾವಿ ಖಾಸಗಿ ಹೊಟೇಲ್​ನಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ  ಮಾತನಾಡಿದ ಅವರು, ರಸ್ತೆ ಅಭಿವೃದ್ಧಿಗೂ ಹಣ ನೀಡುವುದಾಗಿ ಹೇಳಿದರು.

ಅಧಿವೇಶನದಲ್ಲಿ ಪ್ರಸ್ತಾಪಿಸಲು ವಕ್ಫ್ ಹಾಗೂ ಪಂಚಮಸಾಲಿ ಮೀಸಲಾತಿ ಬಿಟ್ಟರೆ ಬಿಜೆಪಿಯವರಿಗೆ ಬೇರೇನೂ ವಿಚಾರ ಗೊತ್ತಿಲ್ಲ. ವಕ್ಫ್ ವಿಚಾರದಲ್ಲಿ ಸಚಿವ ಜಮೀರ್ ಅಹ್ಮದ್ ಒಳ್ಳೆಯ ಉತ್ತರ ಕೊಟ್ಟಿದ್ದಾರೆ. ದುಡ್ಡಿಲ್ಲ ದುಡ್ಡಿಲ್ಲ ಅಂತ ಹೇಳಬೇಡಿ, ನಮ್ಮ ಬಳಿ ದುಡ್ಡು ಇದೆ. ಬಿಜೆಪಿಯವರು ಸುಮ್ಮನೆ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ದುಡ್ಡು ಇಲ್ಲದೇ ಇದ್ದಿದ್ದರೇ ರೋಣದಲ್ಲಿ 200 ಕೋಟಿ ರೂ. ಕೆಲಸ ಮಾಡಲು ಆಗುತ್ತಿತ್ತಾ, ಸಚಿವ ಜಿ ಪರಮೇಶ್ವರ್ ಅವರ ಕ್ಷೇತ್ರದಲ್ಲಿ ಕೆಲಸ ಮಾಡಲು ಆಗುತ್ತಿತ್ತಾ ಎಂದರು.

ಬಿಜೆಪಿಯವರು ಅನುದಾನ ಇಲ್ಲ ಎಂದು ಆತ್ಮಸ್ಥೈರ್ಯ ಕುಗ್ಗಿಸುವ ಕೆಲಸ ಮಾಡುತ್ತಿದ್ದಾರೆ.  ಈ ವೇಳೆ ಬಂಗಾರಪೇಟೆ ನಾರಾಯಣಸ್ವಾಮಿ ಏರು ಧ್ವನಿಯಲ್ಲಿ ಅನುದಾನ ಕೇಳಿದರು. “ಏ ನಾರಾಯಣಸ್ವಾಮಿ ಆಮೇಲೆ ಮಾತಾಡುತ್ತೇನೆ” ಎಂದು ಸಿಎಂ ಹೇಳಿದರು.

ಶಾಸಕ ನಾರಾಯಣಸ್ವಾಮಿ ಅನುದಾನ ಕೇಳುತ್ತಿದ್ದಂತೆ ಶಾಸಕ ವಿಜಯಾನಂದ ಕಾಶಪ್ಪನವರ್ ಕೂಡ ಅನುದಾನಕ್ಕೆ ಬೇಡಿಕೆ ಇಟ್ಟರು. ಆಗ ಸಿಎಂ ಸಿದ್ದರಾಮಯ್ಯ “ಕಾಶಪ್ಪನವರ್ ನೀನಾ… ನಾಮ ಹಾಕಿಕೊಂಡು ಬಂದಿಲ್ಲವಲ್ಲ” ಎಂದರು. ಈ ವೇಳೆ ಕೆಲ ಶಾಸಕರು “ಪರವಾಗಿಲ್ಲ, ಸಿಎಂ ನಾಮ ಹಾಕಿಕೊಂಡು ಬಂದಿಲ್ಲ ಎಂದು ಹೇಳುವ ಮೂಲಕ ನಮಗೆಲ್ಲ ನಾಮ ಹಾಕಿದರು” ಎಂದರು.

“ಕಳೆದ ಬಾರಿ ಘೋಷಣೆ ಮಾಡಿದ್ದ 25 ಕೋಟಿ ಅನುದಾನ ಬಂದಿಲ್ಲ ಎಂದು ಕೆಲ ಶಾಸಕರು ಹೇಳಿದರು. ಕೆಲವರಿಗೆ ಬಂದಿದೆ ಕೆಲವರಿಗೆ ಬಂದಿಲ್ಲ ಸರಿ ಹೋಗುತ್ತೆ. ಎಲ್ಲ ಶಾಸಕರಿಗೆ 10 ಕೋಟಿಯಂತೆ ಸುಮಾರು 2000 ಕೋಟಿ ರೂ. ಅನುದಾನ ನೀಡುತ್ತೇವೆ” ಎಂದು ಹೇಳಿದರು.

“ಮನೆ ಕಟ್ಟಲು ಸರ್ಕಾರ ಕೊಡುತ್ತಿರುವ ಅನುದಾನ ಕಡಿಮೆ ಇದೆ. ಈ ಅನುದಾನ ಹೆಚ್ಚಿಸಿ ಎಂದು ಕುಣಿಗಲ್ ಶಾಸಕ ಡಾ. ರಂಗನಾಥ್ ಮನವಿ ಮಾಡಿದರು. ಸಮಾಜ ಕಲ್ಯಾಣ ಇಲಾಖೆಯಲ್ಲಿ 30 ಸಾವಿರ ಕೋಟಿ ರೂ. ಇದೆ” ಎಂದು ಸಚಿವ ಮಹದೇವಪ್ಪ ಉತ್ತರ ನೀಡಿದರು. “ಎಲ್ಲಿದೆ ಸ್ವಿಸ್ ಬ್ಯಾಂಕ್​​ನಲ್ಲಿರಬೇಕು” ಎಂದು ಮತ್ತೊಬ್ಬ ಸಚಿವರು ಕಿಚಾಯಿಸಿದರು

WhatsApp Group Join Now
Telegram Group Join Now
Share This Article