Ad imageAd image

ದಾವಣಗೆರೆ ಜಿಲ್ಲೆಯ ಉಸ್ತುವಾರಿ ಸಚಿವರನ್ನು ಬದಲಾಯಿಸಬೇಕು: ಕಾಂಗ್ರೆಸ್‌ ಶಾಸಕರೇ ಡಿಕೆಶಿಗೆ ಆಗ್ರಹ

Ravi Talawar
ದಾವಣಗೆರೆ ಜಿಲ್ಲೆಯ ಉಸ್ತುವಾರಿ ಸಚಿವರನ್ನು ಬದಲಾಯಿಸಬೇಕು: ಕಾಂಗ್ರೆಸ್‌ ಶಾಸಕರೇ ಡಿಕೆಶಿಗೆ ಆಗ್ರಹ
WhatsApp Group Join Now
Telegram Group Join Now

ದಾವಣಗೆರೆ, ಡಿಸೆಂಬರ್ 19: ದಾವಣಗೆರೆ ಜಿಲ್ಲೆಯ ಉಸ್ತುವಾರಿ ಸಚಿವ ಎಸ್​ಎಸ್ ಮಲ್ಲಿಕಾರ್ಜುನರನ್ನು ಬದಲಾಯಿಸಬೇಕೆಂದು ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್​​ ಅವರಿಗೆ ಚನ್ನಗಿರಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಸವರಾಜ್ ಶಿವಗಂಗಾ ಮನವಿ ಮಾಡಿದ್ದು, ಪತ್ರ ಬರೆದಿದ್ದಾರೆ.

ಬಿಜೆಪಿ ಬೆಂಬಲಿತ ಅಭ್ಯರ್ಥಿ ಗೆಲುವಿಗೆ ಕಾರಣರಾದ ಆರೋಪ: ಈ ಹಿಂದೆ ನಡೆದ ದಾವಣಗೆರೆ ಜಿಲ್ಲಾ ಡಿಸಿಸಿ ಬ್ಯಾಂಕಿನ ಚುನಾವಣೆಯಲ್ಲಿ ಚನ್ನಗಿರಿ ತಾಲ್ಲೂಕಿನ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯನ್ನು ಬೆಂಬಲಿಸದೆ ಬಿಜೆಪಿ ಬೆಂಬಲಿತ, ಮಾಜಿ ಶಾಸಕರ ಬೆಂಬಲಿಗನ ಗೆಲುವಿಗೆ ಪರೋಕ್ಷವಾಗಿ ಕಾರಣರಾಗಿರುತ್ತಾರೆ. ಹೊನ್ನಾಳಿ ಶಾಸಕರ ಪುತ್ರರಾದ ಸುರೇಂದ್ರರವರು ಈ ಚುನಾವಣೆಯಲ್ಲಿ ಸ್ಪರ್ಧಿಸಿ ವಿಜಯಿಯಾಗಿದ್ದು ರಾಜ್ಯ ಅಪೆಕ್ಸ್‌ ಬ್ಯಾಂಕಿಗೆ ಜಿಲ್ಲೆಯಿಂದ ರಾಜ್ಯ ಅಪೆಕ್ಸ್ ಬ್ಯಾಂಕಿಗೆ ನಿರ್ದೇಶಕರಾಗಿ ನಾಮನಿರ್ದೇಶಿಸಲು ಸಹಕರಿಸುವಂತೆ ಕೋರಿದ್ದರೂ ಬೆಂಬಲಿಸದೆ, ಬಿಜೆಪಿ ಬೆಂಬಲಿಗರನ್ನು ರಾಜ್ಯ ಅಪೆಕ್ಸ್ ಬ್ಯಾಂಕಿನಲ್ಲಿ ನಿರ್ದೇಶಕರನ್ನಾಗಿ ಮುಂದುವರೆಸಿದ್ದು ಜಿಲ್ಲೆಯಲ್ಲಿ ಡಿಸಿಸಿ ಬ್ಯಾಂಕಿನ ಆಡಳಿತ ಮಂಡಳಿಯು ಕಾಂಗ್ರೆಸ್ ಆಡಳಿತದ ಹಿಡಿತದಲ್ಲಿದ್ದರೂ ಸಹ ಮುಲುಗದ ಅನುಭವಿಸುವಂತಾಗಿದೆ ಎಂದು ಉಸ್ತುವಾರಿ ಸಚಿವರ ವಿರುದ್ಧ ಪತ್ರದಲ್ಲಿ ಆರೋಪಿಸಲಾಗಿದೆ.

WhatsApp Group Join Now
Telegram Group Join Now
Share This Article