ಧಾರವಾಡ : 2024-25 ನೇ ಸಾಲಿಗೆ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿ ಯೋಜನೆಯಡಿ 5 ರಿಂದ 18 ವರ್ಷದೊಳಗಿನ ಅಸಾಧಾರಣ ಸಾಧನೆ ಮಾಡಿರುವ ಮಕ್ಕಳಿಗೆ ಜಿಲ್ಲಾ ಮಟ್ಟದ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಪ್ರಶಸ್ತಿಯು ರೂ.10,000 ಸಾವಿರ ರೂ.ಗಳ ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರವನ್ನು ಒಳಗೊಂಡಿರುತ್ತದೆ. ನಾವೀನ್ಯತೆ ತಾರ್ಕಿಕ ಸಾಧನೆಗಳು, ಸಾಮಾಜಿಕ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಕ್ಕಳು ಅರ್ಜಿಗಳನ್ನು ಸಲ್ಲಿಸಬಹುದು.
ಆಸಕ್ತರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಅರ್ಜಿ ಪಡೆದು, ಡಿಸೆಂಬರ್ 27, 2024 ರೊಳಗಾಗಿ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಕಛೇರಿ ದೂರವಾಣಿ ಸಂಖ್ಯೆ: 0836-2447850 ಗೆ ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.