ಬಾಂಗ್ಲಾದಲ್ಲಿ ಮುಂದುವರಿದ ಹಿಂದೂಗಳ ಮೇಲಿನ ದಾಳಿ

Ravi Talawar
 ಬಾಂಗ್ಲಾದಲ್ಲಿ ಮುಂದುವರಿದ ಹಿಂದೂಗಳ ಮೇಲಿನ ದಾಳಿ
WhatsApp Group Join Now
Telegram Group Join Now

ಢಾಕಾ, ಬಾಂಗ್ಲಾದೇಶ: ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂಗಳ ಮೇಲಿನ ದಾಳಿ ನಿಲ್ಲುವ ಯಾವುದೇ ಲಕ್ಷಣಗಳು ಕಾಣಿಸುತ್ತಿಲ್ಲ. ಹೊಸ ಘಟನೆಗಳಲ್ಲಿ ದುಷ್ಕರ್ಮಿಗಳು ಬಾಂಗ್ಲಾದೇಶದ ಮೈಮೆನ್‌ಸಿಂಗ್ ಮತ್ತು ದಿನಾಜ್‌ಪುರದಲ್ಲಿ ಮೂರು ಹಿಂದೂ ದೇವಾಲಯಗಳಲ್ಲಿ ಎಂಟು ವಿಗ್ರಹಗಳನ್ನು ಧ್ವಂಸಗೊಳಿಸಿದ್ದಾರೆ ಎಂದು ಮಾಧ್ಯಮ ವರದಿಯೊಂದು ಶುಕ್ರವಾರ ವರದಿ ಮಾಡಿದೆ.

ವ್ಯಕ್ತಿ ಬಂಧನ: ದೇವಸ್ಥಾನವೊಂದರಲ್ಲಿನ ವಿಧ್ವಂಸಕ ಕೃತ್ಯಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಡೈಲಿ ಸ್ಟಾರ್ ಪತ್ರಿಕೆ ವರದಿ ಮಾಡಿದೆ. ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂ ಸಮುದಾಯದ ವಿರುದ್ಧದ ಘಟನೆಗಳ ಸರಣಿಯಲ್ಲಿ ಇವು ಇತ್ತೀಚಿನ ವರದಿಗಳಾಗಿವೆ.

ಮೈಮೆನ್‌ಸಿಂಗ್‌ನ ಹಲುಘಾಟ್ ಉಪಜಿಲ್ಲೆಯಲ್ಲಿ ಗುರುವಾರ ಮತ್ತು ಶುಕ್ರವಾರ ಎರಡು ದೇವಾಲಯಗಳ ಮೂರು ವಿಗ್ರಹಗಳನ್ನು ಧ್ವಂಸಗೊಳಿಸಲಾಗಿದೆ. ದೇವಸ್ಥಾನದ ಮೂಲಗಳು ಮತ್ತು ಸ್ಥಳೀಯರನ್ನು ಉಲ್ಲೇಖಿಸಿ, ಹಲುಘಾಟ್ ಪೊಲೀಸ್ ಠಾಣೆಯ ಅಧಿಕಾರಿ (OC) ಅಬುಲ್ ಖಯೇರ್ ಈ ಮಾಹಿತಿ ನೀಡಿದ್ದಾರೆ. ಶುಕ್ರವಾರ ಮುಂಜಾನೆ ಹಲುಘಾಟ್‌ನ ಶಾಕುವಾಯ್ ಯೂನಿಯನ್‌ನಲ್ಲಿರುವ ಬೋಂಡರ್‌ಪಾರಾ ದೇವಾಲಯದ ಎರಡು ವಿಗ್ರಹಗಳನ್ನು ದುಷ್ಕರ್ಮಿಗಳು ಧ್ವಂಸ ಮಾಡಿದ್ದಾರೆ ಎಂದು ಅವರು ಹೇಳಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಯಾವುದೇ ಪ್ರಕರಣ ದಾಖಲಾಗಿಲ್ಲ ಮತ್ತು ಈ ಸಂಬಂಧ ಇನ್ನೂ ಯಾರನ್ನೂ ಬಂಧಿಸಲಾಗಿಲ್ಲ ಎಂದು ಖಯೇರ್​ ಹೇಳಿದ್ದಾರೆ.

WhatsApp Group Join Now
Telegram Group Join Now
Share This Article